ಬೆಂಗಳೂರು: ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಕಲಾವಿದರು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರ ಬಳಿ ಮನವಿ ಮಾಡಿದ್ದಾರೆ.
ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕಿರುತೆರೆ ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ
"ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಕಿರುತೆರೆ ಚಿತ್ರೀಕರಣ ಮತ್ತೆ ಆರಂಭವಾಗಿರುವುದು ಸಂತಸದ ವಿಷಯ". ಆದರೆ 60 ವರ್ಷ ಮೇಲ್ಪಟ್ಟವರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲದಿರುವುದರಿಂದ ಹಿರಿಯ ಕಲಾವಿದರಿಗೆ ಸಂಪಾದನೆ ಇಲ್ಲ. ಇದರಿಂದ ದಿನಸಿ, ಮನೆ ಬಾಡಿಗೆ, ಔಷಧಿಗೆ ಹಣ ಇಲ್ಲದೆ ಪರದಾಡುವಂತಾಗಿದೆ.
ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್, ಲಕ್ಷ್ಮಿ ದೇವಮ್ಮ, ಬಿ.ಎಲ್.ಮಂಜುಳಾ, ಗಣೇಶ್ ರಾವ್, ಬೆಂಗಳೂರು ನಾಗೇಶ್, ಶೋಭಾ ರಾಘವೇಂದ್ರ ಸೇರಿದಂತೆ ಹಿರಿಯ ಕಲಾವಿದರು ಡಾ. ಅಶ್ವತ್ಥ್ ನಾರಾಯಣ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಕಲಾವಿದರ ಸಮಸ್ಯೆಗಳನ್ನು ಆಲಿಸಿದ ಡಿಸಿಎಂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
"ಲಾಕ್ಡೌನ್ ಹಿನ್ನೆಲೆಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಕಿರುತೆರೆ ಚಿತ್ರೀಕರಣ ಮತ್ತೆ ಆರಂಭವಾಗಿರುವುದು ಸಂತಸದ ವಿಷಯ". ಆದರೆ, 60 ವರ್ಷ ಮೇಲ್ಪಟ್ಟವರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲದಿರುವುದರಿಂದ ಹಿರಿಯ ಕಲಾವಿದರಿಗೆ ಸಂಪಾದನೆ ಇಲ್ಲ. ಇದರಿಂದ ದಿನಸಿ, ಮನೆ ಬಾಡಿಗೆ, ಔಷಧಿಗೆ ಹಣ ಇಲ್ಲದೆ ಪರದಾಡುವಂತಾಗಿದೆ. ನಮ್ಮ ಸಮಸ್ಯೆಗೆ ಪರಿಹಾರ ಒದಗಿಸಿ," ಎಂದು ಸಂಘದ ಹಿರಿಯ ಸದಸ್ಯರು ಮನವಿ ಮಾಡಿದರು.