ದೇವನಹಳ್ಳಿ:ಬಾಯಿಯಲ್ಲಿ ಎರಡು ಚಿನ್ನದ ತುಣುಕುಗಳನ್ನ ಇಟ್ಟುಕೊಂಡು ಕಳ್ಳ ಸಾಗಣೆ ಮಾಡಲು ಯತ್ನಿಸಿದ ವ್ಯಕ್ತಿಯೊನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.
ಚೆನ್ನೈ ಮೂಲದ 42 ವರ್ಷದ ಪ್ರಯಾಣಿಕ ಬುಧವಾರ ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಈ ವೇಳೆ. ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರನ್ನ ತಪಾಸಣೆ ಮಾಡುವ ಸಮಯದಲ್ಲಿ ಆರೋಪಿ ಬಾಯಿಯೊಳಗೆ ಚಿನ್ನದ ತುಣುಕು ಸಾಗಿಸುತ್ತಿರುವುದು ಪತ್ತೆಯಾಗಿದೆ. 100 ಗ್ರಾಂ ತೂಕದ 4.9 ಲಕ್ಷ ಮೌಲ್ಯದ ಚಿನ್ನವನ್ನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಆತನನ್ನು ವಶಕ್ಕೆ ಪಡೆದಿದ್ದಾರೆ.