ಬೆಂಗಳೂರು: ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4.5 ಕೋಟಿ ರೂ. ಮೌಲ್ಯದ 9 ಟನ್ ರಕ್ತಚಂದನವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.
ರಕ್ತಚಂದನ ಜಪ್ತಿ: ಆಯುಕ್ತ ಕಮಲ್ ಪಂತ್ ಮಾಹಿತಿ ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಖದೀಮರು ಲಾರಿಯಲ್ಲಿ ರಕ್ತಚಂದನವನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆನಂದ್ ಕುಮಾರ್ (51) ಹಾಗೂ ಅನೀಲ್ ಸಿಂಘಿ (47) ಬಂಧಿತ ಆರೋಪಿಗಳು. ಅಲ್ಲದೇ ಪ್ರಮುಖ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ:
ಆ. 1 ರಂದು ರಾತ್ರಿ 10:30ರ ಸಮಯದಲ್ಲಿ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ ಮುಂಭಾಗ ಬಿಳಿ ಬಣ್ಣದ ಫೋರ್ಡ್ ಎಂಡೋವರ್ ಕೆಎ 53 ಎಂಜಿ 5859 ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಮಾರಲು ಗಿರಾಕಿಗಳಿಗಾಗಿ ಕಾಯುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದಿತ್ತು.
₹ 4.50 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಕಾರಿನಲ್ಲಿದ್ದ ಒಂದು ದೊಡ್ಡ ರಕ್ತ ಚಂದನ ಮರದ ತುಂಡು ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಲೆಮರೆಸಿಕೊಂಡಿರುವ ಆರೋಪಿಗಳ ಜೊತೆ ಸೇರಿಕೊಂಡು ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ ರಾಜ್ಯದಿಂದ ರಕ್ತಚಂದನ ಮರಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು. ವಿದೇಶಗಳಿಗೆ ಸರಬರಾಜು ಮಾಡಲು ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯ ಬಿಲ್ಡಿಂಗ್‌ನ ಗೋಡೌನ್ನಲ್ಲಿ ದಾಸ್ತಾನು ಮಾಡಿದ್ದರು. ರಕ್ತ ಚಂದನವನ್ನು ಮರದ ಒಂದು ತುಂಡನ್ನು ಸ್ಯಾಂಪಲ್ಗಾಗಿ ಗಿರಾಕಿಗಳಿಗೆ ತೋರಿಸಲು ತಂದಿದ್ದಾಗಿ ಆರೋಪಿಗಳು ತಿಳಿಸಿದರು ಎಂದು ಮಾಹಿತಿ ನೀಡಿದರು.
₹ 4.50 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ ಆರೋಪಿಗಳೊಂದಿಗೆ ಬನ್ನೇರುಘಟ್ಟ ರಸ್ತೆಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆ ಬೇ ಬಿಲ್ಡಿಂಗ್‌ನ ಗೋಡೌನ್ ಮೇಲೆ ದಾಳಿ ಮಾಡಿದ್ದಾರೆ. ಗೋಡೌನ್ನಲ್ಲಿ ಲಾರಿಯಲ್ಲಿ ದಾಸ್ತಾನು ಮಾಡಿದ್ದ 4.5 ಕೋಟಿ ರೂ. ಬೆಲೆ ಬಾಳುವ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಆಯುಕ್ತರು ತಿಳಿಸಿದರು.
₹ 4.50 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ ಈ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ವಿಭಾಗ ಸಹಾಯಕ ಪೊಲೀಸ್ ಆಯುಕ್ತ ಬಿ.ಎಸ್.ಅಂಗಡಿ , ಹೆಚ್.ಎಸ್.ಪರಮೇಶ್ವರ್, ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.