ಬೆಂಗಳೂರು:ರಾಜ್ಯದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ರಾಜ್ಯ ಕಾಂಗ್ರೆಸ್ ನಾಯಕರು, ಸುರ್ಜೇವಾಲಗೆ ನಕಲಿ ದಾಖಲೆಗಳನ್ನು ಕೊಟ್ಟು ಬಿಡುಗಡೆ ಮಾಡಿಸಿದ್ದಾರೆ. ಈ ಎಲ್ಲ ಪ್ರಯತ್ನಗಳ ಹಿಂದೆ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಇದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್ ಆರೋಪಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿಶ್ವಾಸಾರ್ಹವಾದ ಯಾವುದೇ ಆರೋಪ ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ಸೋತು ಹೋಗಿದೆ. ಅದಕ್ಕೇ ಈ ರೀತಿ ಸುಳ್ಳು ದಾಖಲೆಗಳನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ರಾಜ್ಯ ಕಾಂಗ್ರೆಸ್ ನಾಯಕರು, ಸುರ್ಜೇವಾಲಗೆ ನಕಲಿ ದಾಖಲೆಗಳನ್ನು ಕೊಟ್ಟು ಬಿಡುಗಡೆ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನ ಈ ಎಲ್ಲ ಪ್ರಯತ್ನಗಳ ಹಿಂದೆ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಇದ್ದಾರೆ. ವಾದ್ರಾನ ಹಗರಣಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಪ್ರತಿಬಾರಿ ರಾಬರ್ಟ್ ವಾದ್ರಾ ಹ್ಯಾಪ್ ಮೋರೆ ಹಾಕಿಕೊಂಡು ಇಡಿ ವಿಚಾರಣೆಗೆ ಹೋಗಿ ಬರುವುದನ್ನು ನೋಡಿ ಸಹಿಸಲಾಗದೆ ಕಾಂಗ್ರೆಸ್ಸಿಗರು ಸುಳ್ಳು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮಧುಸೂದನ್ ಟೀಕಿಸಿದರು.