ಕರ್ನಾಟಕ

karnataka

ETV Bharat / city

2011ರ 362 ಪ್ರೊಬೆಷನರಿ ಹುದ್ದೆಗಳ ನೇಮಕ ಸಂಬಂಧ ಚರ್ಚಿಸಿ ಶೀಘ್ರ ನಿರ್ಧಾರ: ಸಚಿವ ಮಾಧುಸ್ವಾಮಿ

ಕರ್ನಾಟಕ ಹೈಕೋರ್ಟ್ ಆದೇಶದ ಮೇಲೆ ಸುಪ್ರೀಂಕೋರ್ಟ್ ಯಾವುದೇ ರೀತಿಯ ಆದೇಶ ನೀಡಿರುವುದಿಲ್ಲ ಎಂದು ತಿಳಿಸಿದೆ. ಈಗ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾ ಅಥವಾ ಸದನದಲ್ಲಿ ಈ ಬಗ್ಗೆ ತೀರ್ಮಾನ ಮಾಡಬೇಕಾ ಎನ್ನುವ ಬಗ್ಗೆ ಚರ್ಚಿಸಲಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸ್ವಲ್ಪ ಸಮಯ ನೀಡಬೇಕು ಎಂದು ಮನವಿ ಮಾಡಿದರು.

ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ

By

Published : Sep 14, 2021, 8:14 PM IST

Updated : Sep 14, 2021, 9:46 PM IST

ಬೆಂಗಳೂರು: 2011ರಲ್ಲಿ ನೇಮಕಗೊಂಡಿರುವ 362 ಎಸಿ ಹುದ್ದೆಗಳನ್ನು ನೇಮಕ ಮಾಡುವ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಗಮನ ಸೆಳೆಯುವ ಸೂಚನೆ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಎಂ.ಪಿ. ಕುಮಾರಸ್ವಾಮಿ, 2011ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕಗೊಂಡಿರುವ 362 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಸಕ ಹೆಚ್.ಕೆ.ಪಾಟೀಲ್, ಈ ಹಿಂದೆ ಈ ಬಗ್ಗೆ ಸದನದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಈಗ ಕಾನೂನು ಸಚಿವ ಮಾಧುಸ್ವಾಮಿ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ಕೆಪಿಎಸ್‌ಸಿ ಸದಸ್ಯರ ಮೇಲೆ ಇದ್ದ ಪ್ರಕರಣಗಳನ್ನು ಸರ್ಕಾರ ವಾಪಸ್ ತೆಗೆದುಕೊಂಡು ಅಭ್ಯರ್ಥಿಗಳಿಗೆ ಮಾತ್ರ ಅನ್ಯಾಯ ಮಾಡುತ್ತಿದೆ. ಸರ್ಕಾರಕ್ಕೆ ಯಾವ ಅಡ್ಡಿ ಇದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಯಾವುದೇ ನೆಪ ಹೇಳದೇ, ಆತ್ಮವಂಚನೆ ಮಾಡಿಕೊಳ್ಳದೇ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

2011ರ 362 ಪ್ರೊಬೆಷನರಿ ಹುದ್ದೆಗಳ ನೇಮಕ ಸಂಬಂಧ ಚರ್ಚಿಸಿ ಶೀಘ್ರ ನಿರ್ಧಾರ: ಸಚಿವ ಮಾಧುಸ್ವಾಮಿ

ಇದೇ ವೇಳೆ ಮಾತನಾಡಿದ ಜೆಡಿಎಸ್ ಸದಸ್ಯ ಎ.ಟಿ. ರಾಮಸ್ವಾಮಿ, ಸಂವಿಧಾನದ ಕಲಂ 320ಎ ಪ್ರಕಾರ ಸದನದಲ್ಲಿ ಮಂಡನೆ ಮಾಡದೇ ನ್ಯಾಯಾಲಯಕ್ಕೆ ಸದನದಲ್ಲಿ ಮಂಡನೆ ಮಾಡಿದ್ದೇವೆ ಎಂದು ತಪ್ಪು ಮಾಹಿತಿ ನೀಡಿದ್ದರು. ಸರ್ಕಾರ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಉತ್ತರಿಸಿದ ಸಚಿವ ಮಾಧುಸ್ವಾಮಿ, ಪಿಸಿ ಕಾಯ್ದೆ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ರಾಷ್ಟ್ರಪತಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಕೆಎಟಿ ರಾಜ್ಯ ಸರ್ಕಾರದ ವಿರುದ್ಧ ಆದೇಶ ನೀಡಿತು. ಅದನ್ನು ಜಾರಿಗೆ ತರಲು ಸರ್ಕಾರ ಮುಂದಾದಾಗ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಕರ್ನಾಟಕ ಹೈಕೋರ್ಟ್ ಆದೇಶದ ಮೇಲೆ ಸುಪ್ರೀಂಕೋರ್ಟ್ ಯಾವುದೇ ರೀತಿಯ ಆದೇಶ ನೀಡಿರುವುದಿಲ್ಲ ಎಂದು ತಿಳಿಸಿದೆ. ಈಗ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾ ಅಥವಾ ಸದನದಲ್ಲಿ ಈ ಬಗ್ಗೆ ತೀರ್ಮಾನ ಮಾಡಬೇಕಾ ಎನ್ನುವ ಬಗ್ಗೆ ಚರ್ಚಿಸಲಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸ್ವಲ್ಪ ಸಮಯ ನೀಡಬೇಕು ಎಂದು ಮನವಿ ಮಾಡಿದರು.

Last Updated : Sep 14, 2021, 9:46 PM IST

ABOUT THE AUTHOR

...view details