ಬೆಂಗಳೂರು :ಹಿಜಾಬ್-ಕೇಸರಿ ವಿವಾದ ನ್ಯಾಯಾಂಗದ ತೀರ್ಪು ಗೌರವಿಸೋಣ. ಪರಿಸ್ಥಿತಿಯ ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಕೊಡುವುದು ಬೇಡ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ಮಧ್ಯಂತರ ತೀರ್ಪು ಕೊಟ್ಟಿದೆ. ನಾವು ನ್ಯಾಯಾಂಗದ ತೀರ್ಪನ್ನು ಗೌರವಿಸಬೇಕು. ಈ ಪರಿಸ್ಥಿತಿಯಲ್ಲಿ ದುರುಪಯೋಗ ಪಡಿಸಿಕೊಳ್ಳುವ ಕೆಲಸವಾಗುತ್ತದೆ. ಆದರೆ, ಇದಕ್ಕೆ ಅವಕಾಶ ನೀಡದೆ ಕೋರ್ಟ್ ತೀರ್ಪನ್ನು ಗೌರವಿಸೋಣ ಎಂದರು.
ಗ್ರ್ಯಾಂಡ್ ಸ್ಟೆಪ್ಸ್ನಿಂದ ರಾಜ್ಯಪಾಲರ ಎಂಟ್ರಿ :ಈ ಬಾರಿಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನದ ಭಾಷಣಕ್ಕಾಗಿ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ವಿಧಾನಸೌಧಕ್ಕೆ ಪ್ರವೇಶಿಸಲಿದ್ದಾರೆ. ಈ ಹಿಂದೆಯೂ ಗ್ರ್ಯಾಂಡ್ ಸ್ಟೆಪ್ಸ್ನಿಂದ ಪ್ರವೇಶ ಮಾಡುತ್ತಿದ್ದರು. ಆದ್ರೆ ಇತ್ತೀಚೆಗೆ ಅದು ಇರಲಿಲ್ಲ. ಆದ್ರೆ, ಈ ಬಾರಿ ಅಧಿವೇಶನಕ್ಕೆ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ರಾಜ್ಯಪಾಲರು ಪ್ರವೇಶಿಸಲಿದ್ದಾರೆ. ಅದಕ್ಕೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.