ಬೆಂಗಳೂರು:ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಮತ್ತು ಸಂಬಂಧಿತ ಉದ್ಯಮಗಳಿಗೆ ವಿಶೇಷ ಪ್ರೋತ್ಸಾಹ ನೀಡುವ ಯೋಜನೆಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಕೋವಿಡ್‌ನಿಂದಾಗಿ ರಾಜ್ಯವು ಆಮ್ಲಜನಕ ಕೊರತೆ ಎದುರಿಸಿದೆ. ರಾಜ್ಯದಲ್ಲಿ ಸದ್ಯ 9 ಆಮ್ಲಜನಕ ಉತ್ಪಾದನಾ ಘಟಕಗಳು/ಕಾರ್ಖಾನೆಗಳು ಮತ್ತು 6 ಆಮ್ಲಜನಕ ಪೂರೈಕೆದಾರರಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದಲ್ಲೀಗ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ 815 ಮೆಟ್ರಿಕ್ ಟನ್ ಮತ್ತು 5,780 ಮೆಟ್ರಿಕ್ ಟನ್ ಶೇಖರಣಾ ಸಾಮರ್ಥ್ಯವಿದೆ. ಈ ಸಾಮರ್ಥ್ಯವನ್ನು ಹೆಚ್ಚಿಸಲು ಯಾರೇ ಉದ್ಯಮಿಗಳು ಮುಂದೆ ಬಂದರೆ ಅವರಿಗೆ ಸೂಕ್ತ ಪ್ರೋತ್ಸಾಹ ನೀಡುತ್ತೇವೆ ಎಂದು ಬೊಮ್ಮಾಯಿ ವಿವರಿಸಿದರು.
ಸರ್ಕಾರದ ಪ್ರೋತ್ಸಾಹ ಹೀಗಿದೆ..