ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಅವರನ್ನು ಹೆಚ್ಚಿನ ವಿಚಾರಣೆಗೆ ಎಸ್ಐಟಿ ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ EB ಕಸ್ಟಡಿಯಲ್ಲಿದ್ದ ಮನ್ಸೂರ್ ಖಾನ್ ಅವಧಿ ನಿನ್ನೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದ್ರೆ, ಪ್ರಕರಣದ ಬಗ್ಗೆ ಎಸ್ಐಟಿ ಕೂಡಾ ತನಿಖೆ ನಡೆಸುತ್ತಿದ್ದು ಆರೋಪಿಯನ್ನು ಬಾಡಿವಾರೆಂಟ್ ಮೂಲಕ ವಶಕ್ಕೆ ಪಡೆದಿದೆ.