ದೊಡ್ಡಬಳ್ಳಾಪುರ (ಬೆಂಗಳೂರು) :ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಇರುವುದರಿಂದ ಕ್ಷೇತ್ರಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದು. ಇಂದು ಕುಮಾರ ಷಷ್ಠಿ ಹಿನ್ನೆಲೆ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸ್ವಾಮಿ ದರ್ಶನ ಪಡೆಯುವುದರಿಂದ ಸರ್ಪ ದೋಷ ನಿವಾರಣೆಯಾಗುವ ನಂಬಿಕೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.