ಬೆಂಗಳೂರು: ಬಸವನಗುಡಿಯ ಶ್ರೀ ಗುರು ರಾಘವೇದ್ರ ಕೋ-ಆಪರೇಟಿವ್ ಸಹಕಾರ ಬ್ಯಾಂಕಿನಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ಮೇಲೆ ಸಿಐಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದರು. ದಾಳಿ ವೇಳೆ ಅಕ್ರಮ ಅವ್ಯವಹಾರ ಸಾಬೀತು ಹಿನ್ನೆಲೆ ಹೆಚ್ಚಿನ ತನಿಖೆಗಾಗಿ 11 ಜನರನ್ನ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಸುಳ್ಳು ದಾಖಲೆ ನೀಡಿ ಕೋಟಿ ಕೋಟಿ ರೂ. ಸಾಲ ಪಡೆದಿದ್ದರು. ಸದ್ಯ ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆಗಳಲ್ಲಿ ಇರುವ ಇವರ ಮನೆ, ಕಚೇರಿ ಮೇಲೆ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮಾಡಿ, ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಗಳ ಕೊರೊನಾ ಟೆಸ್ಟ್ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಅನುಮತಿ ಪಡೆದು ವಶಕ್ಕೆ ಪಡೆದಿದ್ದಾರೆ.