ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕರ್ನಾಟಕ ರತ್ನ, ನಟ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ನಿನ್ನೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಶ್ರೀಶೈಲ ಶ್ರೀಗಳ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
ಕಳೆದ ತಿಂಗಳು ಹೃದಯಾಘಾತದಿಂದ ನಿಧನರಾಗಿದ್ದ ನಟ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಶ್ರೀಶೈಲ ಪೀಠದ ಜಗದ್ಗುರುಗಳು ಭೇಟಿ ನೀಡಿ ಪುನೀತ್ ಪತ್ನಿ ಅಶ್ವಿನಿ ರೇವಂತ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಶ್ರೀಶೈಲ ಶ್ರೀಗಳ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದ ಶ್ರೀಗಳು, ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಮಂಗಳಾಕ್ಷತೆ ಹಾಕಿ ಪುನೀತ್ ಅವರ ಪತ್ನಿ ಅಶ್ವಿನಿ ಸೇರಿದಂತೆ ಅವರ ಪರಿವಾರದವರಿಗೆ ಸಾಂತ್ವನ ಹೇಳಿ ವಿಭೂತಿಯನ್ನು ಆಶೀರ್ವದಿಸಿದರು.