ಕರ್ನಾಟಕ

karnataka

ETV Bharat / city

ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ
ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ

By

Published : May 13, 2021, 4:48 PM IST

Updated : May 13, 2021, 5:09 PM IST

ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆ ಸಂಪೂರ್ಣ ತಹಬದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಕರೆ ನೀಡಿದ್ದಾರೆ.

ಸಚಿವ ಸುರೇಶ್ ಕುಮಾರ್

ಈಗಾಗಲೇ ಪದವಿ, ಸ್ನಾತಕೋತ್ತರ ಪರೀಕ್ಷೆಗಳು ಸೇರಿದಂತೆ ಪಿಯು‌ ಪರೀಕ್ಷೆಗಳನ್ನ ಕೂಡ ಮುಂದೂಡಿಕೆ ಮಾಡಲಾಗಿತ್ತು. ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿ ಎಂದು ಕೆಲ ಖಾಸಗಿ‌ ಶಿಕ್ಷಣ ಸಂಸ್ಥೆಗಳು ಕೂಡಾ ಶಿಕ್ಷಣ ಇಲಾಖೆಗೆ ಒತ್ತಡ ಹೇರಿದ್ದವು. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಸುರೇಶ್ ಕುಮಾರ್ ರವರಿಗೆ ಖಾಸಗಿ‌ ಶಿಕ್ಷಣ ಸಂಸ್ಥೆಗಳು ಪತ್ರ ಕೂಡಾ ಬರೆದಿದ್ದರು.

Last Updated : May 13, 2021, 5:09 PM IST

ABOUT THE AUTHOR

...view details