ಬೆಂಗಳೂರು:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಹತ್ತನೇ ತರಗತಿಯ ಪರೀಕ್ಷೆ ನಡೆಸಿತ್ತು. ಕಳೆದೆರಡು ವರ್ಷಗಳಲ್ಲಿ ಕೋವಿಡ್ನಿಂದ ಸರಿಯಾದ ಕ್ರಮದಲ್ಲಿ ಪರೀಕ್ಷೆ ಮಾಡಲಾಗದೇ ಸಮಸ್ಯೆಯಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳಿಗೆ ಪಠ್ಯ ಹಾಗು ಪರೀಕ್ಷೆಯನ್ನು ಸಮರ್ಪಕವಾಗಿ ಮಾಡಲಾಗಿದೆ.
ಈ ಬಾರಿ ಪರೀಕ್ಷೆ ಬರೆಯಲು ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಗಂಡು ಮಕ್ಕಳು 4,52,732 ಹಾಗೂ 4,21,110 ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದರು. ಸುಮಾರು 5,307 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯನ್ನ ಎದುರಿಸದರು. ರಾಜ್ಯಾದ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ರಾಜ್ಯಾದ್ಯಂತ ಏಪ್ರಿಲ್ 23 ರಿಂದ ಮೌಲ್ಯಮಾಪನ ಮಾಡಲಾಗುತ್ತದೆ. ಸುಮಾರು 34 ಜಿಲ್ಲೆಗಳಲ್ಲಿನ 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆದ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದರು. ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಶುರುವಾಗಿ ಮೇ 1-2 ರೊಳಗೆ ಪೂರ್ಣಗೊಳ್ಳಲಿದೆ ಅಂತ ಮಂಡಳಿ ತಿಳಿಸಿದೆ. ಆ ನಂತರ ಫೈನಾಲೈಸ್ ಮಾಡಲು 10-15 ದಿನ ತೆಗೆದುಕೊಳ್ಳಲಿದ್ದು, ಮೇ 12 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಈ ಲಿಂಕ್‌ಮೂಲಕ ಫಲಿತಾಂಶ ನೋಡಬಹುದು:ಇನ್ನು ಪ್ರತಿ ವರ್ಷದಂತೆ ವಿದ್ಯಾರ್ಥಿಗಳು ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಮಸೇಜ್ ಬರಲಿದೆ. ಹಾಗೇ ಬೋರ್ಡ್ ಅಧಿಕೃತ ವೆಬ್ ಸೈಟ್ kseeb.Karnataka. gov.in ಅಥವಾ karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ:ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್: ಸಚಿವ ಸುಧಾಕರ್