ಕರ್ನಾಟಕ

karnataka

By

Published : Apr 1, 2020, 4:41 PM IST

ETV Bharat / city

ಕೋವಿಡ್-19 ಚಿಕಿತ್ಸೆಗೆ ಸೇಂಟ್ ಜಾನ್ಸ್ ಆಸ್ಪತ್ರೆ ರೆಡಿ; ವೆಂಟಿಲೇಟರ್, ಐಸಿಯು ವ್ಯವಸ್ಥೆ

ಸೋಂಕಿತರು, ಶಂಕಿತರಿಗೆ ಪ್ರತ್ಯೇಕ ಐಸೋಲೇಷನ್ ವಾರ್ಡ್ ನಿರ್ಮಿಸಲಾಗಿದೆ. ಎಲ್ಲ ಸಿಬ್ಬಂದಿ, ಅಧಿಕಾರಿಗಳಿಗೂ ಕೊರೊನಾ ಬಗ್ಗೆ ತರಬೇತಿ ನೀಡಲಾಗಿದೆ. 15 ಐಸಿಯು ಬೆಡ್ ಜೊತೆಗೆ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ.ಪಾಲ್ ಪಾರ್ಥಜಾಮ್ ಹೇಳಿದರು.

St. John's Hospital ready for Kovid-19 treatment
ಡಿಸಿಎಂಗೆ ನೀಡಿದ ಪತ್ರ

ಬೆಂಗಳೂರು: ಕೊರೊನಾ ವೈರಸ್ ಚಿಕಿತ್ಸೆಗೆ ನಗರದ ಸೇಂಟ್‌ ಜಾನ್ಸ್ ಆಸ್ಪತ್ರೆಯಲ್ಲಿ ಆಧುನಿಕ ಸೌಲಭ್ಯದ 200 ಆಸನಗಳು ಸಿದ್ಧವಾಗಿವೆ.

ಸೇಂಟ್ ಜಾನ್ಸ್ ಆಸ್ಪತ್ರೆ ನಿರ್ದೇಶಕ ಡಾ.ಪಾಲ್ ಪಾರ್ಥಜಾಮ್, ಪೋರ್ಟಿಯಾ ಮೆಡಿಕಲ್ ಸಂಸ್ಥೆ ಸಂಸ್ಥಾಪಕ ಮೀನಾ ಗಣೇಶ್ ಅವರು ಅದಕ್ಕೆ ಸಂಬಂಧಿಸಿದ ಪತ್ರವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ್ ಹಾಗೂ ಮೇಯರ್ ಗೌತಮ್ ಕುಮಾರ್ ಅವರಿಗೆ ಸಲ್ಲಿಸಿದರು.

ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಸಾಮರ್ಥ್ಯ ನಿಭಾಯಿಸಲು ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ಕೋವಿಡ್-19 ಸಂಬಂಧಿಸಿದ ಚಿಕಿತ್ಸೆಗಾಗಿ ಅತ್ಯಾಧುನಿಕ ಸೌಲಭ್ಯಗಳ 200 ಆಸನಗಳನ್ನು ಮೀಸಲಿರಿಸಲಾಗಿದೆ ಎಂದು ಅಶ್ವತ್ಥ್​ ನಾರಾಯಣ್ ತಿಳಿಸಿದರು.

ಡಿಸಿಎಂಗೆ ನೀಡಿದ ಪತ್ರ

ಬ್ಲಾಕ್‌ನಲ್ಲಿ 200 ಆಸನಗಳ ವ್ಯವಸ್ಥೆ, ಅವಶ್ಯಕ ವೆಂಟಿಲೇಟರ್ಸ್, ಐಸೋಲೇಷನ್ ಕೊಠಡಿ, ಐಸಿಯು ಕೊಠಡಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿಕೊಂಡಿದ್ದಾರೆ. ಆಸ್ಪತ್ರೆಯ ಈ ಸೇವೆಗೆ ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕೊರೊನಾ ವೈರೆಸ್ ಸೋಂಕಿನ ಲಕ್ಷಣಗಳು, ಸಂಬಂಧಿತ ಆರೋಗ್ಯ ಸಮಸ್ಯೆಗಳು ಹಾಗೂ ಈ ಕುರಿತ ಯಾವುದೇ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಸಾರ್ವಜನಿಕರು ನುರಿತ ವೈದ್ಯರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಲು ಪೋರ್ಟಿಯಾ ಮೆಡಿಕಲ್ ಸಂಸ್ಥೆ ವತಿಯಿಂದ ‘ಟೆಲಿ ಕನ್ಸಲ್ಟೇಷನ್' ಸೇವೆ ಜಾರಿಗೊಳಿಸಲಾಗಿದೆ. 080-66744788ಗೆ (ಸಹಾಯವಾಣಿ) ಕರೆ ಮಾಡಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ಡಿಸಿಎಂ ತಿಳಿಸಿದರು.

ಕೊರೊನಾ ಮಾತ್ರವಲ್ಲದೇ ಇನ್ನಿತರ ಆರೋಗ್ಯ ಸಮಸ್ಯೆ ಬಗ್ಗೆಯೂ ಮಾಹಿತಿ ಪಡೆಯಬಹುದು. ವೈದ್ಯರ ತಂಡ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಹಾಗೂ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮಾರ್ಗದರ್ಶನ ನೀಡಲಿದೆ. ಅಲ್ಲದೇ, ವೆಬ್‌ಸೈಟ್​​​​​ಗೆ (https://t.co/LqPmTkiEnY) ಭೇಟಿ ನೀಡಿ ವೈದ್ಯರ ಸಲಹೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ABOUT THE AUTHOR

...view details