ಕರ್ನಾಟಕ

karnataka

ETV Bharat / city

ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ರದ್ದು - ಅಶೋಕನಗರ ಪೊಲೀಸರಿಂದ ಫಾರೂಕಿಯ ಕಾರ್ಯಕ್ರಮ ರದ್ದು

ಬೆಂಗಳೂರಿನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಮುನಾವರ್ ಫಾರೂಕಿಯ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ರದ್ದುಗೊಳಿಸುವಂತೆ ಅಶೋಕನಗರ ಪೊಲೀಸರು ಕಾರ್ಯಕ್ರಮದ ಆಯೋಜಕರಿಗೆ ಪತ್ರ ಬರೆದಿದ್ದಾರೆ.

stand-up-comedian-munawar-faruqui-show-canceled-in-bengaluru
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಸಾಧ್ಯತೆ: ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ರದ್ದು

By

Published : Nov 28, 2021, 2:26 PM IST

ಬೆಂಗಳೂರು:ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವಂತೆ ಹಾಸ್ಯ ಭಾಷಣಗಳನ್ನು ಮಾಡಿದ್ದ ಗಂಭೀರ ಆರೋಪದಡಿ ಮಧ್ಯಪ್ರದೇಶದ ಇಂದೋರ್​ನಲ್ಲಿ ಬಂಧಿಸಲ್ಪಟ್ಟಿದ್ದ ಮುನಾವರ್ ಫಾರೂಕಿಯ ಕಾರ್ಯಕ್ರಮವನ್ನು ರದ್ದುಗೊಳಿಸಲು ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ಪತ್ರ ಬರೆದಿದ್ದಾರೆ.

ಬೆಂಗಳೂರಿನ ಗುಡ್ ಶೆಫರ್ಡ್ ಆಡಿಟೋರಿಯಂನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಮುನಾವರ್ ಫಾರೂಕಿಯ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ರದ್ದುಗೊಳಿಸುವಂತೆ ಕಾರ್ಯಕ್ರಮದ ಆಯೋಜಕರಿಗೆ ಅಶೋಕನಗರ ಪೊಲೀಸರು ಪತ್ರ ಬರೆದಿದ್ದಾರೆ.

ಅಶೋಕ ನಗರ ಪೊಲೀಸರು ಬರೆದ ಪತ್ರ

ಭಾನುವಾರ ಸಂಜೆ ಆಯೋಜನೆಗೊಂಡಿದ್ದ ಕಾಮಿಡಿ ಶೋನ 600 ಟಿಕೆಟ್‌ಗಳು ಬುಕ್ ಆಗಿದ್ದು, ಕಾರ್ಯಕ್ರಮ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಮಾಡಿತ್ತು. ಹಿಂದೂಪರ ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶೋ ರದ್ದುಗೊಳಿಸುವಂತೆ ಆಯೋಜಕರಿಗೆ ಪೊಲೀಸರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ:''MeToo'' ಕೇಸ್​ನಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್​?.. ಶ್ರುತಿ ಹರಿಹರನ್​ಗೆ ನೋಟಿಸ್!

ABOUT THE AUTHOR

...view details