ಕರ್ನಾಟಕ

karnataka

ETV Bharat / city

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ: ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ - Start of BJP Core Committee Meeting began

ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಮಹತ್ವದ ಸಭೆ ಆರಂಭಗೊಂಡಿದೆ.

ಬಿಜೆಪಿ ಕೋರ್ ಕಮಿಟಿ ಸಭೆ
ಬಿಜೆಪಿ ಕೋರ್ ಕಮಿಟಿ ಸಭೆ

By

Published : Mar 20, 2021, 9:20 AM IST

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ಆರಂಭಗೊಂಡಿದ್ದು, ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ.

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಷಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಾಲ್ಗೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ನಿತರಾಗಿರುವ ಸಚಿವ ಅರವಿಂದ ಲಿಂಬಾವಳಿ, ಕಂದಾಯ ಇಲಾಖೆ ಕಾರ್ಯಕ್ರಮ ನಿಮಿತ್ತ ಗ್ರಾಮ ವಾಸ್ತವ್ಯಕ್ಕೆ ತೆರಳಿರುವ ಅಶೋಕ್, ಕೆ.ಎಸ್. ಈಶ್ವರಪ್ಪ, ಸಿಎಂ ಉದಾಸಿ ಕೋರ್ ಕಮಿಟಿಗೆ ಗೈರಾಗಿದ್ದಾರೆ.

ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಹಿನ್ನೆಲೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಿ ಹೈಕಮಾಂಡ್​ಗೆ ಕಳಿಸಿಕೊಡಲಾಗುತ್ತದೆ.

ABOUT THE AUTHOR

...view details