ಕರ್ನಾಟಕ

karnataka

ETV Bharat / city

ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ-ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು: ಸಿದ್ದರಾಮಯ್ಯ

ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಬೇಕಾದರೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

State and Central Government should formulate a special scheme to assist small industries: Siddaramaiah
ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ,ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು: ಸಿದ್ದರಾಮಯ್ಯ

By

Published : May 2, 2020, 3:12 PM IST

ಬೆಂಗಳೂರು: ಲಾಕ್​ಡೌನ್ ಹಿನ್ನೆಲೆಯಲ್ಲಿ ತೀವ್ರ ನಷ್ಟಕ್ಕೆ ಒಳಗಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಕರ್ನಾಟಕ ಸಣ್ಣ ಕೈಗಾರಿಕೆ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದೆ. ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಬೇಕಾದರೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕಾಗುತ್ತದೆ. ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದಂತಿಲ್ಲ. ಇದುವರೆಗೂ ಸಂಘಗಳ ಪದಾಧಿಕಾರಿಗಳ ಜೊತೆ ಸರ್ಕಾರ ಮಾತುಕತೆ ನಡೆಸಿಲ್ಲ. ನಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳು ಚೇತರಿಸಿಕೊಳ್ಳಬೇಕಾದರೆ ಕೆಲವೊಂದು ರಿಯಾಯಿತಿಗಳನ್ನ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕಾರ್ಖಾನೆ ಮಾಲೀಕರು ಬ್ಯಾಂಕ್‍ಗಳ ಮೂಲಕ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ, ಮಾಸಿಕ ಕಂತು ಪಾವತಿಗೆ ವಿನಾಯಿತಿ, ಉತ್ಪನ್ನಗಳ ರಫ್ತಿಗೆ ಉತ್ತೇಜನ ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಒದಗಿಸಿದರೆ ಮಾತ್ರ ಸಣ್ಣ ಕೈಗಾರಿಕೆಗಳು ಮತ್ತು ಆ ಕೈಗಾರಿಕೆಗಳನ್ನು ಅವಲಂಬಿಸಿರುವ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಈಗಾಗಲೇ ನಷ್ಟ ಅನುಭವಿಸಿರುವ ಕೆಲ ಕಾರ್ಖಾನೆಗಳು ಮತ್ತೆ ಉತ್ಪಾದನೆ ಆರಂಭಿಸಬೇಕಾದರೆ ಬಂಡವಾಳ ಅಗತ್ಯ. ಅದರ ಕಡೆಗೂ ಸರ್ಕಾರ ಗಮನ ಹರಿಸಿ, ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಂಘಗಳ ಪ್ರಮುಖ ಬೇಡಿಕೆಗಳು:

  • ಎಫ್​ಐಆರ್​ಸಿ ಬಿಲ್ಲುಗಳನ್ನು ಪಾವತಿ ಮಾಡಲು ಅವಧಿ ವಿಸ್ತರಣೆ.
  • ಮಾಸಿಕ ವಿದ್ಯುತ್ ಶುಲ್ಕ ಪಾವತಿ ಒಂದು ವರ್ಷದವರೆಗೆ ಮನ್ನಾ.
  • ಕಾರ್ಮಿಕರ ಇಎಸ್‍ಐ, ಪಿಎಫ್ ವಂತಿಗೆ ಪಾವತಿ ಆರು ತಿಂಗಳವರೆಗೆ ಮನ್ನಾ.
  • ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ ಮತ್ತು ದಂಡ ಬಡ್ಡಿ ಕೈ ಬಿಡುವುದು.
  • ಬಿಬಿಎಂಪಿಗೆ ಸಂದಾಯ ಮಾಡಬೇಕಿರುವ ಆಸ್ತಿ ತೆರಿಗೆಯ ನಿಧಾನ ಪಾವತಿಯ ಮೇಲಿನ ಬಡ್ಡಿ/ನಿಗದಿತ ಮೊಬಲಗನ್ನ ಡಿಸೆಂಬರ್​ವರೆಗೆ ಮುಂದೂಡುವುದು.
  • ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ವೇತನವನ್ನು ರಾಜ್ಯ ಸರ್ಕಾರ ಶೇ. 50ರಷ್ಟು ಭರಿಸುವುದು.

ABOUT THE AUTHOR

...view details