ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು ನಾಳೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಈ ಒತ್ತಡವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ನಲ್ಲಿ ಅನುದಾನ ಘೋಷಿಸುವ ಸಾಧ್ಯತೆ ಇದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ಸಿ ರಾಮಚಂದ್ರ ತಿಳಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಈ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುವ ಸಾಧ್ಯತೆ ಇದೆ. ಕಳೆದ ಬಜೆಟ್ನಲ್ಲಿ ಮೈಸೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಘೋಷಣೆ ಮಾಡಲಾಗಿತ್ತು. ಈ ವರ್ಷ ಹಣ ಬಿಡುಗಡೆ ಮಾಡಿ ಕಾಮಗಾರಿ ಶುರು ಮಾಡಲು ಸೂಚಿಸಲಾಗಿದೆ. ತುಮಕೂರಿನಲ್ಲಿ ಈಗಾಗಲೇ ಶುರುವಾಗಿದ್ದು, ಶಿವಮೊಗ್ಗದಲ್ಲಿ ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಅಂತ ತಿಳಿಸಿದರು.