ಕರ್ನಾಟಕ

karnataka

ETV Bharat / city

ಮಂಗಳೂರು ಗಲಭೆ ಸಂಬಂಧ ಸಿಐಡಿ ತನಿಖೆಯ ನಾಟಕ ಯಾಕೆ? ಅದನ್ನು ನಿಲ್ಲಿಸಿಬಿಡಿ: ಸಿಎಂ ವಿರುದ್ಧ ಸಿದ್ದು ಕಿಡಿ - ಸಿಐಡಿ ತನಿಖೆಯ ನಾಟಕ ಏಕೆ

ರಾಜ್ಯ ಸರ್ಕಾರ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಗಲಭೆ ವಿಚಾರವಾಗಿ ಟ್ವಿಟರ್​​ನಲ್ಲಿ ಹರಿಹಾಯ್ದಿದ್ದಾರೆ.

KN_BNG_03_SIDDU_TWEET_SCRIPT_9020923
ರಾಜ್ಯ ಸರ್ಕಾರ, ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ ಗರಂ, ಟ್ವಿಟ್ಟರ್ ನಲ್ಲಿ ಆಕ್ರೋಶ

By

Published : Dec 25, 2019, 5:09 PM IST

ಬೆಂಗಳೂರು:ರಾಜ್ಯ ಸರ್ಕಾರ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಗಲಭೆ ವಿಚಾರವಾಗಿ ಟ್ವಿಟರ್ ನಲ್ಲಿ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು. ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳುವ ಮೂಲಕ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದಿದ್ದಾರೆ. ಗಲಭೆಗೆ ಗುಂಡೇಟಿನಿಂದ ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ, ಸಿಐಡಿ ತನಿಖೆಯ ನಾಟಕ ಏಕೆ? ಅದನ್ನು ನಿಲ್ಲಿಸಿಬಿಡಿ. ಹೆಣ ಬೀಳಿಸಲು ಪೊಲೀಸರಿಗೆ ಆದೇಶ ನೀಡಿದವರು ನೀವೇ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

For All Latest Updates

TAGGED:

ABOUT THE AUTHOR

...view details