ಕರ್ನಾಟಕ

karnataka

ETV Bharat / city

ನೂತನ ಜವಳಿ ನೀತಿ: 10 ಸಾವಿರ ಕೋಟಿ ರೂ ಬಂಡವಾಳ ಹೂಡಿಕೆ, 5 ಲಕ್ಷ ಉದ್ಯೋಗ ಗುರಿ - Skill development

ರಾಜ್ಯದಲ್ಲಿ ಜವಳಿ ಉದ್ಯಮ ಅಭಿವೃದ್ಧಿಗೊಳಿಸುವ ಹಾಗೂ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೂತನ ಜವಳಿ ನೀತಿಯನ್ನು ಜಾರಿಗೊಳಿಸಿದೆ.

state-government-implemented-new-textile-policy

By

Published : Oct 31, 2019, 10:47 PM IST

ಬೆಂಗಳೂರು:ರಾಜ್ಯದಲ್ಲಿ ಜವಳಿ ಉದ್ಯಮ ಅಭಿವೃದ್ಧಿಗೊಳಿಸುವ ಹಾಗೂ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೂತನ ಜವಳಿ ನೀತಿಯನ್ನು ಜಾರಿಗೊಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವಜೆ.ಸಿ.ಮಾಧುಸ್ವಾಮಿ, ನೂತನ ಜವಳಿ ಹಾಗೂ ವಸ್ತ್ರನೀತಿ 2019-2024ಕ್ಕೆ ಅನುಮೋದನೆ ನೀಡಲಾಗಿದೆ. ನೂತನ ಜವಳಿ ನೀತಿಯಲ್ಲಿ ಮುಂದಿನ ಐದು ವರ್ಷದಲ್ಲಿ 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಮೂಲಕ ಸುಮಾರು ಐದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ

ಜವಳಿ ಉದ್ಯಮವನ್ನು ಅಭಿವೃದ್ಧಿಗೊಳಿಸುವ ಜತೆಯಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ಯುವಕರಲ್ಲಿ ಕೌಶಲ ಅಭಿವೃದ್ಧಿಗೊಳಿಸುವ ಯೋಜನೆ ಈ ನೀತಿಯಲ್ಲಿ ಜಾರಿಗೊಳಿಸಲಾಗಿದೆ. ಪ್ರಮುಖವಾಗಿ ಬೆಂಗಳೂರು ಹೊರತುಪಡಿಸಿ, ಕೈಗಾರಿಕೆಗಳನ್ನು ಕಲ್ಯಾಣ-ಕರ್ನಾಟಕ ಹಾಗೂ ರಾಜ್ಯದ ಇತರೆ ಭಾಗಗಳಿಗೆ ಸ್ಥಾಪಿಸಲು ಈ ನೀತಿಯಲ್ಲಿ ಯೋಜನೆ ರೂಪಿಸಲಾಗಿದೆ. ಕಲ್ಯಾಣ-ಕರ್ನಾಟಕ ಹಾಗೂ ಇತರೆ ಭಾಗದಲ್ಲಿ ಆರಂಭಿಸುವ ಕೈಗಾರಿಕೆಗಳಿಗೆ ಹೆಚ್ಚು ಸಬ್ಸಿಡಿ ಹಾಗೂ ಇತರೆ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ನಾಲ್ಕು ಜೋನ್​ಗಳು:

ಜೋನ್ ಎ-ಕಲ್ಯಾಣ-ಕರ್ನಾಟಕ, ಜೋನ್ ಬಿ –ಜಿಲ್ಲಾ ಹಾಗೂ ಪುರಸಭೆ ಹೊರತುಪಡಿಸಿದ ನಗರ, ಜೋನ್ ಸಿ-ಪುರಸಭೆ ಹಾಗೂ ಜಿಲ್ಲಾ ಕೇಂದ್ರ, ಜೋನ್ ಡಿ-ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಎಂದು ಮಾಡಲಾಗಿದೆ ಎಂದು ಹೇಳಿದರು.

ABOUT THE AUTHOR

...view details