ಬೆಂಗಳೂರು: ಎಂ.ಮಹೇಶ್ವರ್ ರಾವ್ ಅವರನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರ, ಶುಕ್ರವಾರ ಆ ವರ್ಗಾವಣೆ ಆದೇಶಕ್ಕೆ ತಡೆ ಹಿಡಿದಿದೆ.
ನಿನ್ನೆ ಜಲಮಂಡಳಿ ಅಧ್ಯಕ್ಷರಾದರು..ಇಂದು ಮೊದಲಿದ್ದ ಹುದ್ದೆಗೆ ವಾಪಾಸಾದರು! - Transfer Order
ಗುರುವಾರ ಎಂ.ಮಹೇಶ್ವರ್ ರಾವ್ ಅವರನ್ನು ಬೆಂಗಳೂರು ಜಲಂಮಡಳಿ ಅಧ್ಯಕ್ಷರನ್ನಾಗಿ ವರ್ಗಾವಣೆಗೊಳಿಸಿ ಶುಕ್ರವಾರ ಆ ಆದೇಶ ತಡೆ ಹಿಡಿದ ರಾಜ್ಯ ಸರ್ಕಾರ.
ಗುರುವಾರ ಮಹೇಶ್ವರ್ ರಾವ್ ಅವರನ್ನು ಜಲಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸುವಂತೆ ಆದೇಶ ಹೊರಡಿಸಿದೆ.
ವರ್ಗಾವಣೆಗೊಳಿಸಿದ 24 ಗಂಟೆಯೊಳಗೆ ಆದೇಶ ತಡೆ ಹಿಡಿದಿರುವುದು ಅಚ್ಚರಿಗೆ ಕಾರಣವಾಗಿದೆ. ಯಾವ ಕಾರಣಕ್ಕೆ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.
ಇಬ್ಬರು ಅಧಿಕಾರಿಗಳ ವರ್ಗಾವಣೆ:ವರ್ಗಾವಣೆ ಪರ್ವ ಮುಂದುವರಿಸಿರುವ ರಾಜ್ಯ ಸರ್ಕಾರ ಇಂದು (ಶುಕ್ರವಾರ) ಮತ್ತಿಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕೆಎಎಸ್ ಅಧಿಕಾರಿ ಜಯವೈಭವ ಸ್ವಾಮಿ ಅವರನ್ನು ರಾಮನಗರ ಜಿಲ್ಲಾ ಪಂಚಾಯತ್ನ ಸಿಇಒ, ಕೆ.ಶಿವರಾಮೇಗೌಡ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ನ ಸಿಇಒರನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.