ಕರ್ನಾಟಕ

karnataka

ETV Bharat / city

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ: ಸಿ.ಎಂ ಬೊಮ್ಮಾಯಿ - ಬಿ ಎಸ್ ಯಡಿಯೂರಪ್ಪ

ರಾಜ್ಯ ಸರ್ಕಾರಿ ನೌಕರರ ಸಂಘ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

State Govt Employees Union Sportswear in Sree Kantheerava Stadium inagurated by c m bommai
ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ

By

Published : May 30, 2022, 9:36 PM IST

ಬೆಂಗಳೂರು:ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಕ್ರೀಡಾಕೂಟದ ಧ್ವಜಾರೋಹಣವನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ನೆರವೇರಿಸಿದರು. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಚಾಲನೆ ನೀಡಿದರು.

ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿಕ್ರೀಡಾಕೂಟದ ಉದ್ಘಾಟನೆ

ಕಾರ್ಯಕ್ರಮ ಉದ್ಘಾಟನೆ ನಂತರ ಮಾತನಾಡಿದ ಮುಖ್ಯಮಂತ್ರಿ, ಕೇಂದ್ರ ಸರ್ಕಾರ ನೌಕರರ ಸರಿಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 7ನೇ ವೇತನ ಆಯೋಗವನ್ನು ರಚನೆ ಮಾಡಲು ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಪ್ರಮುಖ ಕಾರಣರು. ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂಗಿಸಲು ತೀರ್ಮಾನಿಸಲಾಗಿದೆ. ಸರ್ಕಾರಿ ನೌಕರರು ಸಂತೋಷದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್. ಯಡಿಯೂರಪ್ಪ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

ನಿಗದಿತ ಸಮಯದಲ್ಲಿ ಬಡವರ ಕೆಲಸ ನಿರ್ವಹಿಸಿ:ಕರ್ನಾಟಕ ಪ್ರಗತಿಪರ ರಾಜ್ಯ. ರಾಜ್ಯ ಪ್ರಗತಿಪಥದಲ್ಲಿ ನಡೆಯಲು ಪ್ರಗತಿಪರ ಚಿಂತನೆ, ನಾಯಕತ್ವ ಮತ್ತು ಆಡಳಿತ ವ್ಯವಸ್ಥೆ ಇರಬೇಕು. ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲು ಸರ್ಕಾರಿ ನೌಕರರ ಕರ್ತವ್ಯ ಬಹಳ ಮುಖ್ಯ. ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿ, ನಿಮ್ಮ ಕೆಲಸ ಬಡವನಿಗೆ ಮುಟ್ಟಿದರೆ ಪುಣ್ಯಪ್ರಾಪ್ತಿಯೂ ಆಗುತ್ತದೆ. ನಿಗದಿತ ಸಮಯದಲ್ಲಿ ಬಡವರಿಗಾಗಿ ಇರುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಆಸಕ್ತಿಯನ್ನು ವಹಿಸಬೇಕು. ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸಿದರೆ, ಅವರಿಗೆ ಸವಲತ್ತುಗಳನ್ನು ನೀಡಲು ಯಾವ ತೊಂದರೆಯೂ ಇಲ್ಲ ಎಂದರು.

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ

ಸರ್ಕಾರಿ ನೌಕರರು ಒತ್ತಡದಲ್ಲಿ:ಸರ್ಕಾರಿ ನೌಕರರು ಕೆಲಸದ ಒತ್ತಡ, ಮನೆಯ ಒತ್ತಡ ಸೇರಿದಂತೆ ಸಾಕಷ್ಟು ಒತ್ತಡದಲ್ಲಿರುತ್ತೀರಾ, ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆಯಾದರೂ ಯೋಗ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು.

ಕ್ರೀಡಾಕೂಟಕ್ಕೆ ಎರಡು ಕೋಟಿ ರೂ. ಅನುದಾನ:ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ 30 ರಿಂದ 35 ಲಕ್ಷ ರೂಪಾಯಿ ಮಾತ್ರ ನೀಡುತ್ತಿದ್ದವು. ಆದರೆ, ನಮ್ಮ ಸರ್ಕಾರ ಬಂದ ಮೇಲೆ ಎರಡು ಕೋಟಿ ರೂಪಾಯಿ ಅನುದಾನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅನುದಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು.

ಕಂದಾಯ ಸಚಿವ ಆರ್. ಅಶೋಕ್​, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್​ ನಾರಾಯಣ್, ತೋಟಗಾರಿಕೆ ಸಚಿವ ಮುನಿರತ್ನ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ:ಹಿಜಾಬ್ ವಿವಾದ - ಎಬಿವಿಪಿ ಒತ್ತಡದಿಂದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ: ವಿದ್ಯಾರ್ಥಿನಿಯರ ಆರೋಪ

ABOUT THE AUTHOR

...view details