ಬೆಂಗಳೂರು: ರಾಜ್ಯಾದ್ಯಂತ ಕರ್ಫ್ಯೂ ಜಾರಿ ಹಿನ್ನೆಲೆ, ಬೆಂಗಳೂರಿನಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಅಗತ್ಯ ಸೇವೆಯ ಹೆಸರಿನಲ್ಲಿಅನಗತ್ಯವಾಗಿ ಓಡಾಟವನ್ನು ಪೊಲೀಸರು ನಿಯಂತ್ರಿಸುತ್ತಿದ್ದಾರೆ.
ರಾಜ್ಯಾದ್ಯಂತ ಕರ್ಫ್ಯೂ ಜಾರಿ: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸರ್ಪಗಾವಲು! - ಪೊಲೀಸ್ ಕಮಿಷನರ್ ಭಾಸ್ಕರ್ ರಾವ್
ರಾಜ್ಯಾದ್ಯಂತ ಕರ್ಫ್ಯೂ ಜಾರಿ ಹಿನ್ನೆಲೆ, ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಒಂದು ವೇಳೆ ಜನರು ಅನಗತ್ಯವಾಗಿ ಓಡಾಡಿದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.
ನಗರದ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ರಸ್ತೆಯ ಪ್ರತಿಯೊಂದು ಕಡೆ ಚೆಕ್ಪೋಸ್ಟ್ಗಳನ್ನ ನಿರ್ಮಾಣ ಮಾಡಿ, ವಾಹನ ತಪಾಸಣೆ ನಡೆಸಲಾಗುತ್ತಿದೆ. ಒಂದು ವೇಳೆ ಜನರು ಅನಗತ್ಯವಾಗಿ ಓಡಾಡಿದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ (ಎನ್ಡಿಎಂಎ) ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ. ಅಗತ್ಯ ಸಾಮಗ್ರಿ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿಯೊಂದು ವ್ಯಾಪ್ತಿಯಲ್ಲಿ ಡಿಸಿಪಿಗಳು ಕಣ್ಗಾವಲು ಇಡಲಿದ್ದಾರೆ. ಭದ್ರತೆ ದೃಷ್ಟಿಯಿಂದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೂಡ ಸಿಟಿ ರೌಂಡ್ಸ್ ಮಾಡಲಿದ್ದಾರೆ.
ಒಂದು ವೇಳೆ ಸುಖಾಸುಮ್ಮನೆ ಹೊರಗೆ ಬಂದರೆ ಲಾಠಿ ರುಚಿ ತೋರಿಸಲು ಕೂಡ ಪೊಲೀಸರು ಸಿದ್ಧರಾಗಿದ್ದಾರೆ. ಹೀಗಾಗಿ ಬೆಂಗಳೂರಿನಾದ್ಯಂತ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೊಯ್ಸಳ ಗಸ್ತು ತಿರುಗುತ್ತಿದ್ದಾರೆ.