ಬೆಂಗಳೂರು: ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ವೊಂದನ್ನು ಬಂಧಿಸುವಲ್ಲಿ ರಾಜಗೋಪಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರದ ಕೆಂಚಪ್ಪ (34), ಲಗ್ಗೆರೆಯ ಹರೀಶ್ (27), ಮಹಮ್ಮದ್, ನವೀನ್, ವೆಂಕಟೇಶ ಕುಮಾರ್, ಜೇಮ್ಸ್ ಬಂಧಿತ ಆರೋಪಿಗಳು. ಬಂಧಿತರಿಂದ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಟಾರ್ಗೇಟ್ ಮಾಡಿ, ಕಳ್ಳತನ ಮಾಡುತ್ತಿದ್ದರು. ಈ ಹಿಂದೆ ಸಹ ಕಳ್ಳತನ, ಕೊಲೆ ಯತ್ನ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಜೈಲಿನಿಂದ ಹೊರಬಂದ ಮೂರೇ ದಿನಗಳ ನಂತರ ಮತ್ತೆ ತಮ್ಮ ಹಳೆ ಚಾಳಿ ಮುಂದುವರೆಸಿದ್ದರು.