ಬೆಂಗಳೂರು: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಂತ ಹಂತವಾಗಿ ಹಣಕಾಸು ನೆರವು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಂತ ಹಂತವಾಗಿ ಹಣಕಾಸು ಒದಗಿಸಲು ಸಿಎಂ ಸೂಚನೆ - ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ನೀಲನಕ್ಷೆಯನ್ನು ಮಂಡಿಸಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ನೀಲನಕ್ಷೆಯನ್ನು ಮಂಡಿಸಿದರು.
ಅಭಿವೃದ್ಧಿ ಯೋಜನೆಗಳ ಕುರಿತು ವಿವರ ಒದಗಿಸಿದರು. ಇದಕ್ಕೆ ಒಪ್ಪಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಂತ ಹಂತವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.