ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅನಧಿಕೃತ ತರಗತಿ ನಡೆಸಿದರೆ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್
ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರವೇ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿವೆ ಎಂದು ವರದಿಯಾಗಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರವೇ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಂತಹ ಶಾಲೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ, ಈ ರೀತಿ ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಆಯಕ್ತರು ಮತ್ತು ಅಪರ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.