ಬೆಂಗಳೂರು: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸುಗ್ರೀವಾಜ್ಞೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದ್ರೆ ಇದು ಜಾರಿಯಾದ ಮೇಲೆಯೇ ಮಾಹಿತಿ ನೀಡಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದರಾಯನಪುರ ಸೇರಿದಂತೆ ರಾಜ್ಯದ ವಿವಿಧೆಡೆ ವೈದ್ಯರು, ಆಶಾ ಕಾರ್ಯಕರ್ತರು, ಅಧಿಕಾರಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಇದೀಗ ಬಿಗಿ ನಿಲುವು ತರಲು ಮುಂದಾಗಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಎಪಿಡಮಿಕ್ ಕಾಯ್ದೆ ಜಾರಿಗೊಳಿಸಲು ಚರ್ಚಿಸಲಾಗಿದೆ. ಆಶಾ ಕಾರ್ಯಕರ್ತರು, ವೈದ್ಯರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡುತ್ತಿದ್ದು, ಉದ್ದೇಶಪೂರ್ವಕವಾಗಿ ಸೋಂಕು ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.
ಇನ್ನು ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ನಿರ್ಧರಿಸಲಾಗಿದ್ದ ವಿವಿಧ 46 ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಅನುಮೋದನೆ ನೀಡಲಾಗಿದೆ. ಇದರ ಜೊತೆಗೆ ಟಿಪ್ಪು ಗಲಾಟೆ, ಕನ್ನಡ ಪರ ಹೋರಾಟಗಾರರು, ಕಾವೇರಿ ಗಲಾಟೆ, ರೈತರ ಗಲಾಟೆಯಲ್ಲಿ ಭಾಗಿಯಾದವರ ವಿರುದ್ಧದ 152 ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಂಪುಟದ ಇತರೆ ಪ್ರಮುಖ ತೀರ್ಮಾನಗಳು: