ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ವಿರುದ್ಧ ಹೋರಾಡಲು ಬಿಬಿಎಂಪಿ ಇಂದಿನಿಂದ ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನಗರದ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ 250 ರೂ. ದಂಡ ತೆರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತರ ಪಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನಸಂದಣಿಯಿರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್‌ಗಳು ಗಸ್ತು ತಿರುಗುತ್ತಿದ್ದು, ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಚಿತ್ರಮಂದಿರಗಳು, ಮಾಲ್, ರೆಸ್ಟೋರೆಂಟ್, ಹೋಟೆಲ್ ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ತೆರಳುವವರು ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾಲಿಕೆ ಸೂಚಿಸಿದೆ. ಪ್ರವೇಶ ದ್ವಾರಗಳಲ್ಲಿ ಜನರ ದೈಹಿಕ ಉಷ್ಣಾಂಶಗಳನ್ನು ತಪಾಸಣೆ ನಡೆಸಲು ಸೂಚಿಸಲಾಗಿದೆ.