ಬೆಂಗಳೂರು: ಕಾಲೇಜಿನ 2ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೀನಾ (19) ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ. ಜೀವನಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಮೀನಾ ಬಿಎ ವ್ಯಾಸಂಗ ಮಾಡುತ್ತಿದ್ದು, ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದಳು. ನಿನ್ನೆ ಅಕ್ಕನ ಜೊತೆ ಕೌಟುಂಬಿಕ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.