ಕರ್ನಾಟಕ

karnataka

ETV Bharat / city

ಬೆಂಗಳೂರಿನಲ್ಲಿ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ:  ಮಾನಸಿಕ ಖಿನ್ನತೆಯೇ ಸಾವಿಗೆ ಕಾರಣವಾ? - ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

suicide
suicide

By

Published : Jun 20, 2022, 9:25 AM IST

Updated : Jun 20, 2022, 10:26 AM IST

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಶರಣಾದ ಘಟನೆ ತಡರಾತ್ರಿ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುದರ್ಶನ್ ಶೆಟ್ಟಿ (45) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಸಬ್ ಇನ್ಸ್‌ಪೆಕ್ಟರ್ ಆಗಿದ್ದಾರೆ.

ನಿವೃತ್ತ ಯೋಧನಾಗಿದ್ದ ಸುದರ್ಶನ್ ಶೆಟ್ಟಿ, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಕುಡಿತದ ಚಟಕ್ಕೆ ಒಳಗಾಗಿದ್ದ ಅವರನ್ನ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ ಬಳಿಕ ಮದ್ಯ ವ್ಯಸನ ಬಿಟ್ಟಿದ್ದರು.

ಕೆಲ ದಿನಗಳಿಂದ ಸುದರ್ಶನ್ ಮನಸ್ಥಿತಿ ಸರಿಯಿಲ್ಲದ ಕಾರಣ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಿಟ್​ ಅಂಡ್​​ ರನ್​: ನೋಡು-ನೋಡುತ್ತಿದ್ದಂತೆ ವ್ಯಕ್ತಿಗೆ ಗುದ್ದಿ ಕಾರಿನ ಸಮೇತ ಪರಾರಿಯಾದ ಚಾಲಕ!

Last Updated : Jun 20, 2022, 10:26 AM IST

ABOUT THE AUTHOR

...view details