ಕರ್ನಾಟಕ

karnataka

ETV Bharat / city

ತೈಲ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಹೈಗ್ರೌಂಡ್ಸ್ ಪೊಲೀಸರಿಂದ ಮ್ಯಾಜಿಸ್ಟ್ರೇಟ್​ಗೆ ವರದಿ ಸಲ್ಲಿಕೆ - ಬೆಂಗಳೂರು ಪ್ರತಿಭಟನೆ ಸುದ್ದಿ

ರಾಷ್ಟಿಯ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿದ್ದು, ಪ್ರತಿಭಟನೆ ನಡೆಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ‌. ಅಲ್ಲದೆ ಪ್ರತಿಭಟನೆಗೆ ಅವಕಾಶ ನಿರಾಕರಿಸಿ ತಿಳುವಳಿಕೆ ನೀಡಲಾಗಿತ್ತು. ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರೂ, ಎನ್​ಡಿಎಂಎ ಕಾಯ್ದೆ ಉಲ್ಲಂಘನೆ ಮಾಡಿದ್ದರಿಂದ ಇಂದು ನಡೆದ ಕೆಪಿಸಿಸಿ ಪ್ರತಿಭಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಮ್ಯಾಜಿಸ್ಟ್ರೇಟ್​ಗೆ ವರದಿ ನೀಡಿದ್ದಾರೆ.

Magistrate Report
ತೈಲ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

By

Published : Jun 29, 2020, 9:15 PM IST

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ನಡೆಸಿದ ಸೈಕಲ್ ಜಾಥಾ ಹಾಗೂ ಪ್ರತಿಭಟನೆ ಕಾನೂನು ಬಾಹಿರವಾಗಿದ್ದು, ಪ್ರತಿಭಟನಾಕಾರರ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು ಮ್ಯಾಜಿಸ್ಟ್ರೇಟ್​ಗೆ ವರದಿ ನೀಡಿದ್ದಾರೆ.

ರಾಷ್ಟಿಯ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿದ್ದು, ಪ್ರತಿಭಟನೆ ನಡೆಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ‌. ಅಲ್ಲದೆ ಪ್ರತಿಭಟನೆಗೆ ಅವಕಾಶ ನಿರಾಕರಿಸಿ ಶನಿವಾರ ರಾತ್ರಿಯೇ ಅವಕಾಶ ಕೋರಿದ್ದವರಿಗೆ ತಿಳುವಳಿಕೆ ನೀಡಲಾಗಿತ್ತು. ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರೂ, ಎನ್​ಡಿಎಂಎ ಕಾಯ್ದೆ ಉಲ್ಲಂಘನೆ ಮಾಡಿದ್ದರಿಂದ ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಈ ಸಂಬಂಧ ಮ್ಯಾಜಿಸ್ಟ್ರೇಟ್​ಗೆ ವರದಿ ನೀಡಿದ್ದಾರೆ.

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದೆ. ಸಾಮಾಜಿಕ ಅಂತರವಿಲ್ಲದೆ ಸೈಕಲ್ ಜಾಥಾವನ್ನೂ ನಡೆಸಲಾಗಿದೆ. ಸಂಪೂರ್ಣ ಪ್ರತಿಭಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಹೈಗ್ರೌಂಡ್ ಪೊಲೀಸರು ಮ್ಯಾಜಿಸ್ಟ್ರೇಟ್​ಗೆ ವರದಿ ಸಲ್ಲಿಸಿದ್ದಾರೆ.

ABOUT THE AUTHOR

...view details