ಕರ್ನಾಟಕ

karnataka

By

Published : Mar 12, 2022, 7:58 AM IST

ETV Bharat / city

ತುಮಕೂರಲ್ಲಿ ರಸ್ತೆ ಗುಂಡಿ ರಿಪೇರಿ: ವರದಿ ಸಲ್ಲಿಸುವಂತೆ ಪಾಲಿಕೆಗೆ ಹೈಕೋರ್ಟ್ ತಾಕೀತು

ರಸ್ತೆ ಗುಂಡಿ ಮುಚ್ಚಲು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ತುಮಕೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ತಾಕೀತು ಮಾಡಿದೆ..

ವರದಿ ಸಲ್ಲಿಸುವಂತೆ ಪಾಲಿಕೆಗೆ ಹೈಕೋರ್ಟ್ ತಾಕೀತು
ವರದಿ ಸಲ್ಲಿಸುವಂತೆ ಪಾಲಿಕೆಗೆ ಹೈಕೋರ್ಟ್ ತಾಕೀತು

ಬೆಂಗಳೂರು :ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವರದಿ ಸಲ್ಲಿಸುವಂತೆ ಪಾಲಿಕೆಗೆ ತಾಕೀತು ಮಾಡಿದೆ.

ನಗರದ ರಸ್ತೆ ಗುಂಡಿ ಮುಚ್ಚಲು ಪಾಲಿಕೆ ಹಾಗೂ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವಾದಿಸಿ, ತುಮಕೂರು ಮಹಾನಗರದಲ್ಲಿ 35 ವಾರ್ಡ್‌ಗಳಿವೆ. ಸ್ಮಾರ್ಟ್‌ ಸಿಟಿ ಯೋಜನೆ ಅಡಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಆದರೂ, ನಗರದ ರಸ್ತೆ ಗುಂಡಿಗಳು ಹಾಗೆಯೇ ಉಳಿದಿವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಕೋರಿ ಕಳೆದ ಮೂರು ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಒದಗಿಸಿಲ್ಲ ಎಂದು ಆರೋಪಿಸಿದರು.

ತುಮಕೂರು ಮಹಾನಗರ ಪಾಲಿಕೆ ಪರ ವಕೀಲರು ವಾದಿಸಿ, ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಲಾಗಿದೆ. ಈ ಕುರಿತಂತೆ ಸಮಗ್ರ ವರದಿ ಸಲ್ಲಿಸಲು 2 ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ಪೀಠ, ವಿಚಾರಣೆಯನ್ನು ಏಪ್ರಿಲ್‌ 7ಕ್ಕೆ ಮುಂದೂಡಿತು.

(ಇದನ್ನೂ ಓದಿ: 4 ವರ್ಷದ ಹಿಂದೆ ಪ್ರೀತಿಸಿ ಮದುವೆ.. ಗದಗದಲ್ಲಿ ಸ್ಕೂಟಿ ಕಲಿಯುತ್ತಿದ್ದ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ!)

ABOUT THE AUTHOR

...view details