ಕರ್ನಾಟಕ

karnataka

ETV Bharat / city

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಗರ್ಭಿಣಿಯರಿಗೆ ಸಹಾಯಧನ: ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಹೈಕೋರ್ಟ್ - ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ

ಕೋವಿಡ್-19 ನಿರ್ವಹಣೆ ಸಂಬಂಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸಹಾಯಧನ ನೀಡುವ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Subsidies for pregnant women under National Food Security Act
ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಹೈಕೋರ್ಟ್

By

Published : Apr 3, 2021, 2:07 PM IST

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 4 (ಬಿ) ಪ್ರಕಾರ, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸಹಾಯಧನ ನೀಡುವ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೋವಿಡ್-19 ನಿರ್ವಹಣೆ ಸಂಬಂಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು ವಾದಿಸಿ, ಗರ್ಭಿಣಿಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ 5 ಸಾವಿರ ರೂ. ಸಹಾಯಧನದ ಬಗ್ಗೆ ವಿವರಿಸಿದರು.

ವಾದ ಆಲಿಸಿದ ಪೀಠ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 4 (ಬಿ) ಪ್ರಕಾರ ಸಹಾಯಧನ ನೀಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತನ್ನ ಪಾತ್ರದ ಬಗ್ಗೆ ತಿಳಿಸಿದೆ. ಅದರಂತೆ ರಾಜ್ಯ ಸರ್ಕಾರವೂ ತನ್ನ ನಿಲುವು ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್​ 7ಕ್ಕೆ ಮುಂದೂಡಿತು.

ಇದೇ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಮೆಮೋ ಸಲ್ಲಿಸಿ, ರಾಜ್ಯದಲ್ಲಿ 4.69 ಲಕ್ಷ ಕೋವಿಡ್ ಲಸಿಕೆ ಲಭ್ಯವಿದ್ದು, 141 ಸರ್ಕಾರಿ ಹಾಗೂ 340 ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. 45 ವರ್ಷದ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್​ 1ರಿಂದ ಲಸಿಕೆ ನೀಡುವ ಕಾರ್ಯಕ್ರಮ ಆರಂಭಿಸಲಾಗಿದೆ. ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಮತ್ತು ಖಾಸಗಿ ಕೇಂದ್ರಗಳಲ್ಲಿ 200 ರೂ.ಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಆರೋಗ್ಯ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಓದಿ:ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಆಡುಗೋಡಿ ಟೆಕ್ನಿಕಲ್ ಸೆಂಟರ್​ಗೆ ಹಾಜರಾದ ಸಿಡಿ ಲೇಡಿ!

ABOUT THE AUTHOR

...view details