ಬೆಂಗಳೂರು : ಪಟ್ಟಣ ಪಂಚಾಯತ್, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ಗೆ ಬೆಂಬಲ.. ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಹೆಚ್ಡಿಕೆ - ಸ್ಥಳೀಯ ಸಂಸ್ಥೆ ಚುನಾವಣೆ
ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು..
ಹೆಚ್ಡಿಕೆ
ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ, ಜೆಡಿಎಸ್ ಪಕ್ಷದ ವಿರುದ್ಧ ಮಾಡಿದ ಅಪಪ್ರಚಾರಗಳ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಕೈ ಹಿಡಿದ ಜನತೆ ಗೌರವಯುತ ತೀರ್ಪು ನೀಡಿರುವುದನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.