ಕರ್ನಾಟಕ

karnataka

ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ್ ನೇಮಕ ರದ್ದು ಆದೇಶಕ್ಕೆ ತಡೆ ನೀಡಿದ ಸುಪ್ರೀಂ

By

Published : Apr 5, 2022, 4:48 PM IST

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದೇ ರಾಜ್ಯಪಾಲರು ಪ್ರೊ.ಕೆ.ಆರ್ ವೇಣುಗೋಪಾಲ್ ಅವರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು..

Supreme Court
ಸುಪ್ರೀಂ ಕೋರ್ಟ್​

ಬೆಂಗಳೂರು :ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಪ್ರೊ.ಕೆ.ಆರ್.ವೇಣುಗೋಪಾಲ್ ಅವರನ್ನು ನೇಮಕ ಮಾಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ರಾಜ್ಯ ಹೈಕೋರ್ಟ್ ತೀರ್ಪಿಗೆ ಈಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ವಿವಿ ಕುಲಪತಿಯಾಗಿ ಮುಂದುವರಿಯಲು ಪ್ರೊ.ಕೆ.ಆರ್.ವೇಣುಗೋಪಾಲ್ ಅವರಿಗೆ ಹಾದಿ ಸುಗಮವಾಗಿದೆ.

ಪ್ರಕರಣದ ಹಿನ್ನೆಲೆ : ಕುಲಪತಿ ಹುದ್ದೆಗೆ ವೇಣುಗೋಪಾಲ್ ನೇಮಕ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಾತಿಯನ್ನು ಅಸಿಂಧುಗೊಳಿಸಿತ್ತು. ನಂತರ ವೇಣುಗೋಪಾಲ್, ಸರ್ಕಾರ, ರಾಜ್ಯಪಾಲರ ಕಚೇರಿ ಹಾಗೂ ಬೆಂಗಳೂರು ವಿವಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ ಏಕಸದಸ್ಯ ಪೀಠದ ತೀರ್ಪು ಸರಿಯಿದೆ ಎಂದಿತ್ತು.

ಇದನ್ನು ಪ್ರಶ್ನಿಸಿ ವೇಣುಗೋಪಾಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದೇ ರಾಜ್ಯಪಾಲರು ಪ್ರೊ.ಕೆ.ಆರ್ ವೇಣುಗೋಪಾಲ್ ಅವರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ:ರಾಷ್ಟ್ರೀಯ ತುರ್ತು ಸಹಾಯವಾಣಿಯಲ್ಲಿ ಲೋಪ : ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ABOUT THE AUTHOR

...view details