ನವದೆಹಲಿ :ತಮ್ಮ ವಿರುದ್ಧ ದಾಖಲಾದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್ಗೆ ಸಿಎಂ ಬಿಎಸ್ವೈ ಮತ್ತು ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣ.. ಬಿಎಸ್ವೈ, ನಿರಾಣಿ ಬಂಧಿಸದಂತೆ ಸೂಚನೆ ನೀಡಿದ 'ಸುಪ್ರೀಂ'.. - ತನಿಖಾಧಿಕಾರಿಗಳಿಗೆ ಸುಪ್ರೀಂ ಸೂಚನೆ
15:21 January 27
'ಬಿಎಸ್ವೈ, ನಿರಾಣಿ ಬಂಧಿಸ್ಬೇಡಿ', 'ಹೈ' ಆದೇಶಕ್ಕೆ ತಡೆ ನೀಡಲ್ಲ ಎಂದ 'ಸುಪ್ರೀಂ'
ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 'ನೀವು ಮುಖ್ಯಮಂತ್ರಿಯಾಗಿದ್ದು, ನಿಮ್ಮ ವಿರುದ್ಧ ಬಂಧನದ ವಾರಂಟ್ ಹೊರಡಿಸುವವರು ಯಾರು? ಎಂದು ಪ್ರಶ್ನಿಸಿದೆ. 2011ರಲ್ಲಿ ಖಾಸಗಿ ಹೂಡಿಕೆದಾರನಿಗೆ 26 ಎಕರೆ ಮಂಜೂರು ಮಾಡಿದ್ದ ಆರೋಪದಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ:ಪರಿಷತ್ ಸದಸ್ಯರ ಜೊತೆ ಸಿಎಂ ಸಭೆ: ಸಭಾಪತಿ, ಉಪಸಭಾಪತಿ ಸ್ಥಾನದ ಗೊಂದಲಕ್ಕೆ ಬೀಳಲಿದೆಯಾ ತೆರೆ!?
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಅಸ್ತು ಎಂದಿದ್ದು, ಇದನ್ನು ಪ್ರಶ್ನಿಸಿ ಸಿಎಂ ಬಿಎಸ್ವೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಅರ್ಜಿಯನ್ನು ಪರಿಶೀಲಿಸುವುದಾಗಿ ಹೇಳಿಕೆ ನೀಡಿದ್ದು, ಮಾತ್ರವಲ್ಲದೇ ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಂಧಿಸಬಾರದೆಂದು ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.
ಸಿಎಂ ಬಿಎಸ್ವೈ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದ್ದು, ಸಿಎಂ ಅವರಿಗೆ ಬಂಧನದಿಂದ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ ಸಿಎಂಗೆ ಮನವಿ ನೀಡುತ್ತಾರೆ ವಿನಃ ವಾರಂಟ್ ಹೊರಡಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.