ದೇವನಹಳ್ಳಿ :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಗಳು ಐಶ್ವರ್ಯ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಡಿಕೆಶಿ ಮಗಳ ಆರತಕ್ಷತೆಯಲ್ಲಿ ಭಾಗಿಯಾಗಲು ಸುರ್ಜೇವಾಲಾ ಬೆಂಗಳೂರಿಗೆ - Aishwarya Daughter of DK Shivakumar
ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರು ಆರತಕ್ಷತೆ ಡಿಕೆಶಿ ಮಗಳ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆರತಕ್ಷತೆಗೂ ಮುನ್ನ ಸುರ್ಜೇವಾಲಾ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಕಾಂಗ್ರೆಸ್ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ..
![ಡಿಕೆಶಿ ಮಗಳ ಆರತಕ್ಷತೆಯಲ್ಲಿ ಭಾಗಿಯಾಗಲು ಸುರ್ಜೇವಾಲಾ ಬೆಂಗಳೂರಿಗೆ Surjewala Arrives in Bangalore](https://etvbharatimages.akamaized.net/etvbharat/prod-images/768-512-10661984-thumbnail-3x2-vis.jpg)
ಸುರ್ಜೆವಾಲಾ ಬೆಂಗಳೂರಿಗೆ ಆಗಮನ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಬೆಂಗಳೂರಿಗೆ ಆಗಮನ..
ಸುರ್ಜೇವಾಲಾರನ್ನು ಏರ್ಪೋರ್ಟ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಮತ್ತು ಈಶ್ವರ ಖಂಡ್ರೆ ಸ್ವಾಗತಿಸಿದರು. ದೇವನಹಳ್ಳಿಯ ಖಾಸಗಿ ರೆಸಾರ್ಟ್ನಲ್ಲಿ ಡಿಕೆಶಿ ಮಗಳ ಆರತಕ್ಷತೆಯಲ್ಲಿ ಸಂಜೆ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಆರತಕ್ಷತೆಗೂ ಮುನ್ನ ಸುರ್ಜೇವಾಲಾ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.