ಬೆಂಗಳೂರು: ನಗರದ ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ತೊಂದರೆಗೊಳಗಾದ ವ್ಯಕ್ತಿಗಳು ಪರಿಹಾರ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಮನವಿಗಳನ್ನು ನ್ಯಾಯಪೀಠ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಬಿಬಿಎಂಪಿಗೆ ಮಧ್ಯಂತರ ಆದೇಶ ನೀಡಿದೆ.
ರಸ್ತೆ ಗುಂಡಿಗಳಿಗೆ ಪರಿಹಾರ ಮಾರ್ಗ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ - ಕರ್ನಾಟಕ ಹೈಕೋರ್ಟ್ ಸುದ್ದಿ
ನಗರದ ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ತೊಂದರೆಗೊಳಗಾದ ವ್ಯಕ್ತಿಗಳು ಪರಿಹಾರ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಮನವಿಗಳನ್ನು ನ್ಯಾಯಪೀಠ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಬಿಬಿಎಂಪಿಗೆ ಮಧ್ಯಂತರ ಆದೇಶ ನೀಡಿದೆ.
![ರಸ್ತೆ ಗುಂಡಿಗಳಿಗೆ ಪರಿಹಾರ ಮಾರ್ಗ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ](https://etvbharatimages.akamaized.net/etvbharat/prod-images/768-512-4002463-thumbnail-3x2-lek.jpg)
ವಿಜಯನ್ ಮೆನನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ರಸ್ತೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ವಿವರ ಸಲ್ಲಿಸಲು ಮೊಬೈಲ್ ಆ್ಯಪ್ ಬಳಸುವ ವ್ಯವಸ್ಥೆ ಮಾಡಬೇಕು. ಬಿಬಿಎಂಪಿ ಅಧಿಕೃತ ವೆಬ್‌ಸೈಟ್‌ನಲ್ಲಿ ಆ ಫೋಟೋಗಳನ್ನು ಅಪ್ಲೋಡ್ ಮಾಡಿ ದೂರುದಾರರಿಗೆ ರಸ್ತೆ ದುರಸ್ತಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಕಾಮಗಾರಿ ನಡೆಸಿರುವ ಫೋಟೋಗಳನ್ನು ಸಹ ಅಪ್ಲೋಡ್ ಮಾಡಬೇಕು. ಪ್ರತಿ ವಾರ್ಡ್‌ಗಳ ರಸ್ತೆ ನಿರ್ಮಾಣ, ದುರಸ್ತಿ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠ ಬಿಬಿಎಂಪಿಗೆ ಸೂಚನೆ ನೀಡಿ, ಕೈಗೊಂಡಿರುವ ವರದಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸೂಚಿಸಿತು. ಇದೇ ವೇಳೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿಕೆ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರು ರಸ್ತೆ ಗುಂಡಿ ಹಾಗೂ ರಸ್ತೆ ಅಪಘಾತ ಕುರಿತು ಮಾಹಿತಿ ನೀಡಿದ್ರು. ಈ ವೇಳೆ ಬಿಬಿಎಂಪಿ ವಕೀಲರು ನಗರದಲ್ಲಿ 470 ರಸ್ತೆಗಳಲ್ಲಿ 362 ರಸ್ತೆಗಳಲ್ಲಿ ಗುಂಡಿಗಳು ಇಲ್ಲ ಹಾಗೂ 108 ರಸ್ತೆಗಳನ್ನು ಗುಂಡಿಗಳು ಬಿದ್ದಿರುವ ರಸ್ತೆಗಳು ಎಂದು ಗುರುತಿಸಲಾಗಿದೆ ಎಂದು ಹೈಕೋರ್ಟ್ಗೆ ವರದಿ ನೀಡಿದ್ರು.