ಕರ್ನಾಟಕ

karnataka

ETV Bharat / city

ಡ್ರಗ್ಸ್‌ ಕೇಸ್‌ ಆರೋಪಿಗಳ ರಕ್ಷಣೆಗೆ ಕೆಲ ಸಚಿವರ ಯತ್ನ ಆರೋಪ- ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ ಮತ್ತು ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? ಈ ಎಲ್ಲ ವಿವರ ಕೇಳಿ ಗೃಹ ಸಚಿವ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ..

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Sep 6, 2020, 8:09 PM IST

ಬೆಂಗಳೂರು :ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಿ ಎಸ್‌ ಯಡಿಯೂರಪ್ಪಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾದಕ‌ವಸ್ತು ಸೇವನೆ ಹಾಗೂ ಮಾರಾಟದ ಆರೋಪಿಗಳ ವಿರುದ್ಧ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು.

ಬಂಧಿತರಲ್ಲಿ ಕೆಲವರಿಗೆ ರಾಜ್ಯ ಬಿಜೆಪಿ ಪಕ್ಷದ ನಾಯಕರ ಜೊತೆ ಸಂಬಂಧ ಇದೆ ಎಂದು ಹೇಳಲಾಗುತ್ತಿದೆ. ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪವೂ ಕೇಳಿ ಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ ಮತ್ತು ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? ಈ ಎಲ್ಲ ವಿವರ ಕೇಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕೂಡ ಶಾಮೀಲಾಗಿರುವ ಆರೋಪಗಳಿವೆ. ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ? ಎನ್​ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ ಹಾಗೂ ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ, ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ. ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ? ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ? ಎಂಬ ವಿವರವನ್ನು ಕೇಳಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಸಿಕ್ಕಿರುವ ಮಕ್ಕಳ ತಂದೆ-ತಾಯಿಗಳಿಂದ ರಹಸ್ಯವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ಇದೆಯೇ? ಇಂತಹ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಕೈಗೊಂಡ ಕ್ರಮಗಳೇನು? ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ? ಎಂಬ ವಿವರವನ್ನು ಕೇಳಿದ್ದು ಆದಷ್ಟು ಶೀಘ್ರ ಉತ್ತರ ಲಭಿಸುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

For All Latest Updates

ABOUT THE AUTHOR

...view details