ಕರ್ನಾಟಕ

karnataka

ETV Bharat / city

ಟಾಕಿಂಗ್ ಲ್ಯಾಪ್​​ಟಾಪ್ ನೀಡದ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಅಂಧ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ 2014ರ ಜುಲೈ 2ರಂದು ಉಚಿತ ಟಾಕಿಂಗ್ ಯೋಜನೆ ಜಾರಿಗೆ ತರಲಾಗಿತ್ತು. ಅದರಂತೆ 2014ರಿಂದ 2017ರವರೆಗೆ ಕೆಲವು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಆದರೆ, 2018-19 ಮತ್ತು 2019-20ನೇ ಶೈಕ್ಷಣಿಕ ವರ್ಷದಲ್ಲಿ ಈ ಲ್ಯಾಪ್‌ಟಾಪ್ ಗಳನ್ನು ವಿತರಿಸಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಈವರೆಗೆ ಲ್ಯಾಪ್‌ಟಾಪ್ ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ.

HC Talking Laptop
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Nov 4, 2020, 1:00 AM IST

ಬೆಂಗಳೂರು: ಅಂಧ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ 'ಟಾಕಿಂಗ್ ಲ್ಯಾಪ್‌ಟಾಪ್' ವಿತರಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಿಲ್ಲ ಎಂದು ಆರೋಪಿಸಿ ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ಅರ್ಜಿದಾರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ :
ಅಂಧ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ 2014ರ ಜುಲೈ 2ರಂದು ಉಚಿತ ಟಾಕಿಂಗ್ ಯೋಜನೆ ಜಾರಿಗೆ ತರಲಾಗಿತ್ತು. ಅದರಂತೆ 2014ರಿಂದ 2017ರವರೆಗೆ ಕೆಲವು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಆದರೆ, 2018-19 ಮತ್ತು 2019-20ನೇ ಶೈಕ್ಷಣಿಕ ವರ್ಷದಲ್ಲಿ ಈ ಲ್ಯಾಪ್‌ಟಾಪ್ ಗಳನ್ನು ವಿತರಿಸಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಈವರೆಗೆ ಲ್ಯಾಪ್‌ಟಾಪ್ ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ.

ಅಲ್ಲದೆ, ವರ್ಷದಿಂದ ವರ್ಷಕ್ಕೆ ಸರ್ಕಾರ ಅನುದಾನವನ್ನು ಸಹ ಕಡಿತಗೊಳಿಸುತ್ತಾ ಬಂದಿದೆ. ಯೋಜನೆ ಘೋಷಣೆಯಾದ 2014-15ರಲ್ಲಿ 4 ಕೋಟಿ ರೂಪಾಯಿ ಹಣ ಒದಗಿಸಲಾಗಿತ್ತು. 2015-16ರಲ್ಲಿ 3.50 ಕೋಟಿಗೆ ಇಳಿಸಲಾಗಿದೆ. 2019-20ರಲ್ಲಿ ಕೇವಲ 2.41 ಕೋಟಿ ರೂ. ಅನುದಾನ ನೀಡಲಾಗಿದೆ. ಪರಿಣಾಮ ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ 2018-19ನೇ ಮತ್ತು 2019-20ನೇ ಶೈಕ್ಷಣಿಕ ಸಾಲಿನ ಉಚಿತ ಟಾಕಿಂಗ್ ಲ್ಯಾಪ್‌ಟಾಪ್ ಗಳನ್ನು ಫಲಾನುಭವಿ ವಿದ್ಯಾರ್ಥಿಗಳಿಗೆ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details