ಕರ್ನಾಟಕ

karnataka

ETV Bharat / city

ಐಐಟಿ ಮಾದರಿಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳ ಮೇಲ್ದರ್ಜೆಗೆ ಟಾಸ್ಕ್ ಫೋರ್ಸ್: ಸಿಎಂ - ಐಐಟಿ ಮಾದರಿ ಕಾಲೇಜು ಅಭಿವೃದ್ಧಿ

ರಾಜ್ಯದ ಆಯ್ದ 14 ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮೇಲ್ದರ್ಜೆಗೇರಿಸಬೇಕು, ಈಗಾಗಲೇ ಉತ್ತಮ ರೀತಿಯಲ್ಲಿ ಸ್ಥಾಪಿತವಾಗಿರುವ ಹಾಗೂ ಮೂಲಸೌಲಭ್ಯ, ಶಿಕ್ಷಕ ವರ್ಗ, ಹಾಸ್ಟೆಲ್ ವ್ಯವಸ್ಥೆಯಿರುವಂತಹ ಕಾಲೇಜುಗಳನ್ನು ಕೆಐಟಿಗೆ ಮೇಲ್ದರ್ಜೆಗೇರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

IIT
IIT

By

Published : May 6, 2022, 8:21 AM IST

ಬೆಂಗಳೂರು: ಐಐಟಿ ಮಾದರಿಯಲ್ಲಿ ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ 2022-23 ರ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಿಎಂ, ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್​​ಐಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು. ಕೆಐಟಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪ್ರಮುಖ ಐಟಿ ಕಂಪನಿಗಳು, ಕೈಗಾರಿಕೋದ್ಯಮಿಗಳ ಪ್ರಮುಖರ ಸೇವೆಯನ್ನು ಪಡೆಯಬಹುದು ಎಂದರು.

ರಾಜ್ಯದ ಆಯ್ದ 14 ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮೇಲ್ದರ್ಜೆಗೇರಿಸಬೇಕು, ಈಗಾಗಲೇ ಉತ್ತಮ ರೀತಿಯಲ್ಲಿ ಸ್ಥಾಪಿತವಾಗಿರುವ ಹಾಗೂ ಮೂಲಸೌಲಭ್ಯ, ಶಿಕ್ಷಕ ವರ್ಗ, ಹಾಸ್ಟೆಲ್ ವ್ಯವಸ್ಥೆಯಿರುವಂತಹ ಕಾಲೇಜುಗಳನ್ನು ಕೆಐಟಿಗೆ ಮೇಲ್ದರ್ಜೆಗೆ ಏರಿಸಲು ಆಯ್ದುಕೊಳ್ಳಬೇಕು. ಗುಲ್ಬರ್ಗಾದ ಇಂಜಿಯರಿಂಗ್ ಕಾಲೇಜನ್ನು ಈ ಯೋಜನೆಯಡಿ ಮೇಲ್ದರ್ಜೆಗೇರಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಿಎಂ ಸೂಚಿಸಿದರು.


ಕಲ್ಯಾಣ ಕರ್ನಾಟಕದ ಕಲಬುರಗಿ, ಕಿತ್ತೂರು ಕರ್ನಾಟಕ ವಿಭಾಗದಲ್ಲಿ ಹಾವೇರಿ ಹಾಗೂ ಉತ್ತರ ಕನ್ನಡ ( ಕಾರವಾರ) ಇಂಜಿನಿರಿಂಗ್ ಕಾಲೇಜು, ಮೈಸೂರು ವಿಭಾಗದಲ್ಲಿ ಕೆ.ಆರ್.ಪೇಟೆ ಹಾಗೂ ಕೊಡುಗು, ಬೆಂಗಳೂರು ವಿಭಾಗದಲ್ಲಿ ಎಸ್ ಕೆಎಸ್‌ಜೆಟಿಐ ಹಾಗೂ ರಾಮನಗರದ ಇಂಜಿನಿಯರಿಂಗ್ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮುಂದಿನ ವರ್ಷದೊಳಗೆ ಎನ್​ಐಟಿ ಮಟ್ಟಕ್ಕೆ ಅಭಿವೃದ್ಧಿಯಾಗಬೇಕು. ಕಾಲೇಜುಗಳಲ್ಲಿ ವಿಷಯವಾರು ಕಲಿಕಾ ಉತ್ಕೃಷ್ಟ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಾಶಸ್ತ್ಯ ನೀಡಬೇಕು. ಕೆಐಟಿಗಳ ನಿರ್ಮಾಣಕ್ಕೆ ವೈಜ್ಞಾನಿಕ ಚಿಂತನೆ ಅಗತ್ಯ. ಆರ್‌ಎಂಡ್‌ಡಿ ಹಾಗೂ ಉದ್ಯೋಗಾವಕಾಶಗಳಿಗೆ ಇಲ್ಲಿ ಪ್ರಾಮುಖ್ಯತೆ ನೀಡಬೇಕು. ಕೆಐಟಿಗಳಿಗಾಗಿ ಇಂಜಿನಿಯರಿಂಗ್ ಕಾಲೇಜುಗಳ ಆಯ್ಕೆ, ಲೋಗೋ, ಬ್ರ್ಯಾಡಿಂಗ್ ಉತ್ತಮ ರೀತಿಯಲ್ಲಿ ಆಗಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಇದನ್ನೂ ಓದಿ: ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ: 3 ವರ್ಷಗಳೊಳಗೆ ಕಾಮಗಾರಿ ಮುಗಿಸಲು ಸಿಎಂ ಸೂಚನೆ

ABOUT THE AUTHOR

...view details