ಬೆಂಗಳೂರು: ರಾಜಭವನದಲ್ಲಿ ಇಂದು ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರಿಗೆ ಚಹಾಕೂಟವನ್ನು ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಹಾಕೂಟದಲ್ಲಿ ಭಾಗಿಯಾಗಿದ್ದರು.
ರಾಷ್ಟ್ರಪತಿಗಳಿಗೆ ರಾಜಭವನದಲ್ಲಿ ಚಹಾಕೂಟ: ರಾಜ್ಯಪಾಲರು, ಹೈಕೋರ್ಟ್ ನ್ಯಾಯಮೂರ್ತಿಗಳು ಭಾಗಿ - ಥಾವರ್ ಚಂದ್ ಗೆಹ್ಲೋಟ್
ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದು, ಗಣ್ಯರನ್ನು ಭೇಟಿಯಾದರು. ಚಹಾಕೂಟದಲ್ಲಿ ಭಾಗಿಯಾಗಿ ಕೆಲಕಾಲ ಸಮಾಲೋಚನೆ ನಡೆಸಿದರು.
ರಾಷ್ಟ್ರಪತಿಗಳಿಗೆ ರಾಜಭವನದಲ್ಲಿ ಚಹಾಕೂಟ: ರಾಜ್ಯಪಾಲರು, ಹೈಕೋರ್ಟ್ ನ್ಯಾಯಮೂರ್ತಿಗಳು ಭಾಗಿ
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿ ಇತರ ನ್ಯಾಯಮೂರ್ತಿಗಳು ಮತ್ತವರ ಕುಟುಂಬಸ್ಥರು ಭಾಗಿಯಾಗಿದ್ದು, ಎಲ್ಲರ ಜೊತೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿದರು.