ಕರ್ನಾಟಕ

karnataka

ETV Bharat / city

ಡಿಕೆಶಿ ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ - Revant Reddy meets DK Shivakumar

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸಂಘಟನೆಯಲ್ಲಿ ತೊಡಗಿರುವ ಡಿಕೆಶಿ ಕೈಗೊಂಡಿರುವ ಕಾರ್ಯತಂತ್ರಗಳು, ಎದುರಾದ ಉಪಚುನಾವಣೆಗಳಲ್ಲಿ ನಡೆಸಿದ ತಂತ್ರಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವ ರೀತಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ರೇವಂತ್​ ರೆಡ್ಡಿ ಈ ಸಂದರ್ಭ ಮಾರ್ಗದರ್ಶನ ಪಡೆದರು..

Bangalore
ಡಿಕೆಶಿ ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ

By

Published : Jul 5, 2021, 1:26 PM IST

ಬೆಂಗಳೂರು :ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ರೇವಂತ್​ ರೆಡ್ಡಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸದಾಶಿವನಗರದ ಡಿಕೆಶಿ ನಿವಾಸದಲ್ಲಿ ಬೆಳಗ್ಗೆ ಭೇಟಿ ಮಾಡಿದ ರೇವಂತ್, ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಅಲ್ಲದೆ, ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಅಭಿನಂದನೆ ಸಲ್ಲಿಸಿದರು.

ಡಿಕೆಶಿ ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ

ಕಾಂಗ್ರೆಸ್ ಪಕ್ಷದ ಸಂಸದರು ಆಗಿರುವ ರೇವಂತ್​ ರೆಡ್ಡಿ, ಕಳೆದ ಶನಿವಾರ ಅಧ್ಯಕ್ಷರಾಗಿ ಘೋಷಿತರಾಗಿದ್ದಾರೆ. ಈ ಹಿಂದೆ ಪಕ್ಷದ ಅಧ್ಯಕ್ಷರಾಗಿದ್ದ ಎಂ ಉತ್ತಮ್ ಕುಮಾರ್ ರೆಡ್ಡಿ, ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದ ಹಿನ್ನೆಲೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಯುವ ನಾಯಕ ಹಾಗೂ ಸಂಸದ ರೇವಂತ್ ರೆಡ್ಡಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸಂಘಟನೆಯಲ್ಲಿ ತೊಡಗಿರುವ ಡಿಕೆಶಿ ಕೈಗೊಂಡಿರುವ ಕಾರ್ಯತಂತ್ರಗಳು, ಎದುರಾದ ಉಪಚುನಾವಣೆಗಳಲ್ಲಿ ನಡೆಸಿದ ತಂತ್ರಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವ ರೀತಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ರೇವಂತ್​ ರೆಡ್ಡಿ ಈ ಸಂದರ್ಭ ಮಾರ್ಗದರ್ಶನ ಪಡೆದರು.

ಯುವ ನಾಯಕರಾಗಿ ಮುಂಬರುವ ವಿಧಾನಸಭೆ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳು ಪಕ್ಷವನ್ನು ಸಜ್ಜುಗೊಳಿಸಬೇಕಾಗಿದೆ. ಸಿಎಂ ಆಗಿದ್ದ ವೈ ರಾಜಶೇಖರ ರೆಡ್ಡಿ ನಿಧನದ ನಂತರ ಕಾಂಗ್ರೆಸ್ ಪಕ್ಷಕ್ಕೆ ದಯನೀಯ ಹಿನ್ನಡೆ ಉಂಟಾಗಿದೆ. ಇದೀಗ ಅವರ ಪುತ್ರ ಜಗನ್ಮೋಹನ ರೆಡ್ಡಿ ಪ್ರತ್ಯೇಕ ಪಕ್ಷ ಕಟ್ಟಿದ್ದು, ಪಕ್ಷ ಅಧಿಕಾರದಲ್ಲಿದೆ. ಸದ್ಯ ತೆಲುಗುದೇಶಂ ಪಕ್ಷ ಹಾಗೂ ವೈಎಸ್​ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ರೇವಂತ್ ರೆಡ್ಡಿ ಮೇಲಿದೆ.

ಡಿಕೆಶಿ ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ

ಪಕ್ಷ ಸಂಘಟನೆ ವಿಚಾರದಲ್ಲಿ ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯವಿರುವ ಹಿನ್ನೆಲೆ ಕರ್ನಾಟಕದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಅವರು ಮಾರ್ಗದರ್ಶನ ಪಡೆಯುತ್ತಿದ್ದಾರೆ.
ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪದಗ್ರಹಣವನ್ನು ಸರಳವಾಗಿ ಆಚರಿಸಿಕೊಳ್ಳಲು ತೀರ್ಮಾನಿಸಿರುವ ರೇವಂತ್, ಈ ಸಂದರ್ಭ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರನ್ನ ಆಹ್ವಾನಿಸುತ್ತಿದ್ದಾರೆ.

ಇದರ ಭಾಗವಾಗಿ ಕರ್ನಾಟಕಕ್ಕೆ ಆಗಮಿಸಿರುವ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಪಕ್ಷ ಸಂಘಟನೆ ವಿಚಾರದಲ್ಲಿ ಮಾರ್ಗದರ್ಶನ ನೀಡಿರುವ ಶಿವಕುಮಾರ್, ಸಮಾರಂಭಕ್ಕೂ ತಾವು ಆಗಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಧೂಳಿಗೂ ಸಮವಿಲ್ಲ: ಸಿಪಿವೈ, ವಿಶ್ವನಾಥ್​ ವಿರುದ್ಧ ಸಚಿವ ಸೋಮಶೇಖರ್ ಗರಂ

ABOUT THE AUTHOR

...view details