ಕರ್ನಾಟಕ

karnataka

ETV Bharat / city

ಪಾರ್ಕ್ ಜಾಗದಲ್ಲಿ ದೇವಸ್ಥಾನ ನಿರ್ಮಾಣ: ತೆರವು ಮಾಡಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಕರ್ನಾಟಕ ಗೃಹ ಮಂಡಳಿ ನಿರ್ಮಿಸಿರುವ ಸಿ ಎಚ್ ಎಸ್ ಲೇಔಟ್ 5ನೇ ಹಂತದಲ್ಲಿ ಉದ್ಯಾನವನಕ್ಕೆ ಜಾಗ ಮೀಸಲಿರಿಸಲಾಗಿದೆ. ಈ ಪ್ರದೇಶದಲ್ಲಿ ಶಿವ ಮಂದಿರ ಟ್ರಸ್ಟ್ ಹೆಸರಿನಲ್ಲಿ ಸ್ಥಳೀಯ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿದ್ದಾರೆ. ಸ್ಥಳೀಯರ ವಿರೋಧದ ನಡುವೆಯೂ ದೇವಾಲಯ ನಿರ್ಮಾಣ ಕಾಮಗಾರಿ ಮುಂದುವರಿದಿದ್ದು ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

By

Published : Jun 18, 2020, 12:54 AM IST

temple-construction-in-park-high-court-directs-bbmp
ಪಾರ್ಕ್ ಜಾಗದಲ್ಲಿ ದೇವಸ್ಥಾನ ನಿರ್ಮಾಣ: ತೆರವು ಮಾಡಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು:ಯಲಹಂಕ ಉಪನಗರದ ಸಿ ಎಚ್ ಎಸ್ ಬಡಾವಣೆಯಲ್ಲಿ ಪಾರ್ಕ್​ಗೆ ಮೀಸಲಿಟ್ಟಿದ್ದ ಜಾಗದಲ್ಲಿ ನಿರ್ಮಾಣ ಮಾಡುತ್ತಿರುವ ದೇವಸ್ಥಾನವನ್ನು ತೆರವುಗೊಳಿಸಿ, ಕೆಎಂಸಿ ಕಾಯ್ದೆ ಸೆಕ್ಷನ್ 321 ರ ಪ್ರಕಾರ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ.

ಪಾರ್ಕ್​ಗೆ ಮೀಸಲಿಟ್ಟಿದ್ದ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡುವುದನ್ನು ಪ್ರಶ್ನಿಸಿ ವಕೀಲ ಎ ವಿ ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಬಿಬಿಎಂಪಿ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ನಿರ್ಮಿಸುತ್ತಿರುವ ಟ್ರಸ್ಟ್ಗೆ ನೋಟಿಸ್ ನೀಡಿ ವಿವರಣೆ ಕೇಳಿದ್ದೇವೆ. ವಿವರಣೆ ದೊರೆತ ನಂತರ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು.

ಬಿಬಿಎಂಪಿ ಪರ ವಕೀಲರ ಹೇಳಿಕೆಯನ್ನು ಒಪ್ಪದ ಪೀಠ, ಕೇವಲ ನೋಟಿಸ್ ನೀಡಿದರೆ ಪ್ರಯೋಜನವಿಲ್ಲ. ನಿಯಮ ಉಲ್ಲಂಘಿಸಿ ದೇವಸ್ಥಾನ ನಿರ್ಮಿಸುತ್ತಿದ್ದಾರೆ. ಕೆಎಂಸಿ ಕಾಯ್ದೆಯ ಸೆಕ್ಷನ್ 321 ರ ಪ್ರಕಾರ ಅದನ್ನು ತೆರವು ಮಾಡಲು ಕ್ರಮ ಕೈಗೊಳ್ಳಬೇಕು. ಈ ಪ್ರಕಾರ ಕ್ರಮ ಕೈಗೊಂಡು ಅದರ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಬಿಬಿಎಂಪಿಗೆ ಪೀಠಸ ಸೂಚಿಸಿದ ಪೀಠ ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಕರ್ನಾಟಕ ಗೃಹ ಮಂಡಳಿ ನಿರ್ಮಿಸಿರುವ ಸಿ ಎಚ್ ಎಸ್ ಲೇಔಟ್ 5ನೇ ಹಂತದಲ್ಲಿ ಉದ್ಯಾನವನಕ್ಕೆ ಜಾಗ ಮೀಸಲಿರಿಸಲಾಗಿತ್ತು. ಈ ಪ್ರದೇಶದಲ್ಲಿ ಶಿವ ಮಂದಿರ ಟ್ರಸ್ಟ್ ಹೆಸರಿನಲ್ಲಿ ಸ್ಥಳೀಯ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿದ್ದಾರೆ. ಸ್ಥಳೀಯರ ವಿರೋಧದ ನಡುವೆಯೂ ದೇವಾಲಯ ನಿರ್ಮಾಣ ಕಾಮಗಾರಿ ಮುಂದುವರಿದಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ಸಾರ್ವಜನಿಕ ಪ್ರದೇಶವಾದ ಪಾರ್ಕ್ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಾಲಯವನ್ನು ತೆರವು ಮಾಡಲು ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ABOUT THE AUTHOR

...view details