ಬೆಂಗಳೂರು:ಶ್ರೀಲಂಕಾದ ಚರ್ಚ್ಗಳಲ್ಲಿ ಗುಂಡಿನ ದಾಳಿ ನಡೆಸಿ ನರಮೇಧಕ್ಕೆ ಕಾರಣವಾಗಿದ್ದ ಉಗ್ರರು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕಾಲಿಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಬೆಂಗಳೂರಿಗೆ ಉಗ್ರರು ನುಗ್ಗಿರುವ ವದಂತಿಗೆ ತೆರೆ ಎಳೆದ ಪೊಲೀಸ್ ಇಲಾಖೆ - kannadanews
ಬೆಂಗಳೂರಿಗೆ ಉಗ್ರರು ನುಗ್ಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವದಂತಿಗೆ ಪೊಲೀಸರು ತೆರೆ ಎಳೆದಿದ್ದಾರೆ. ಅಲ್ಲದೆ ವದಂತಿಗೆ ಕಿವಿಗೊಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಈ ವದಂತಿಯನ್ನು ನಂಬಬೇಡಿ ಎಂದು ಪೊಲೀಸ್ ಇಲಾಖೆ ಸಂದೇಶ ರವಾನಿಸಿದೆ. ಶ್ರೀಲಂಕಾ ಸ್ಫೋಟದ ಬಳಿಕ ಉಗ್ರರು ಬೆಂಗಳೂರಿಗೆ ಬಂದಿದ್ದಾರೆ ಎಂಬ ವದಂತಿ ಹಬ್ಬಿದ್ದು, ಈ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶ್ರೀಲಂಕಾದಲ್ಲಿ ಸ್ಫೋಟವಾದ ಬಳಿಕ ನಗರಕ್ಕೆ ನಾಲ್ವರು ಉಗ್ರರು ಬಂದಿದ್ದಾರೆ. ಮುಂದಿನ 15 ದಿನಗಳೊಳಗಾಗಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ ಬೆಂಗಳೂರಿಗೆ ನುಗ್ಗಿದ್ದಾರೆ. ವೈಟ್ ಫೀಲ್ಡ್, ಬೆಳ್ಳಂದೂರು ಭಾಗಗಳ ಐಟಿ ಕಂಪನಿಗಳೇ ಉಗ್ರರ ಟಾರ್ಗೆಟ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿದಾಡುತ್ತಿತ್ತು. ಹೀಗಾಗಿ ಈ ರೀತಿಯ ಸುಳ್ಳುಸುದ್ದಿಗಳನ್ನು ನಂಬಬೇಡಿ ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.