ಕರ್ನಾಟಕ

karnataka

ETV Bharat / city

ಕೇಂದ್ರ ಸರ್ಕಾರ ನನ್ನ ಫೋನ್ ಟ್ಯಾಪ್ ಮಾಡಿದೆ: ದಿನೇಶ್ ಗುಂಡೂರಾವ್ ಆರೋಪ - central government

ಫೋನ್ ಟ್ಯಾಪಿಂಗ್ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆಯೇ ಹೊರತು, ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ನನ್ನ ಫೋನ್ ಅನ್ನು ಟ್ಯಾಪ್ ಮಾಡಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯಿತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ದಿನೇಶ್ ಗುಂಡೂರಾವ್

By

Published : Aug 16, 2019, 8:54 PM IST

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಫೋನ್ ಕದ್ದಾಲಿಕೆ ಸರ್ವೆ ಸಾಮಾನ್ಯವಾಗಿದೆ. ಕೇಂದ್ರ ಸರ್ಕಾರ ನಮ್ಮ ಫೋನ್​ಗಳನ್ನ ಟ್ಯಾಪಿಂಗ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ಫೋನ್ ಟ್ಯಾಪ್ ಕುರಿತು ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದಿದ್ದ ವಿವಿಧ ಘಟಕಗಳ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಬಗ್ಗೆ ಏಕೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಗೊತ್ತಿಲ್ಲ. ಫೋನ್ ಟ್ಯಾಪಿಂಗ್ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆಯೇ ಹೊರತು, ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ನನ್ನ ಫೋನ್ ಅನ್ನು ಟ್ಯಾಪ್ ಮಾಡಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯಿತ್ತಿದೆ ಎಂದು ದೂರಿದರು.

ಯಡಿಯೂರಪ್ಪ ಅವರದ್ದು ಒನ್ ಮ್ಯಾನ್ ಶೋ. ಇದುವರೆಗೂ ಮಂತ್ರಿ ಮಂಡಲ ರಚನೆ ಮಾಡಿಲ್ಲ. ಸಿಎಂ ಆಡಳಿತ ನಡೆಸುತ್ತಾ ದೇಶದಲ್ಲೇ ಅವರು ಹೊಸ ದಾಖಲೆ ಸೃಷ್ಟಿಸಿದ್ದಾರೆ. ದೆಹಲಿಗೆ ಹೋದರೂ ಸಂಪುಟ ವಿಸ್ತರಣೆಯ ಅವರ ಉದ್ದೇಶ ಇನ್ನೂ ಈಡೇರಿಲ್ಲ. ಪ್ರವಾಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಯಡಿಯೂರಪ್ಪ ರಾಜ್ಯಕ್ಕೆ ಕರೆದುಕೊಂಡು ಬರಬೇಕಾಗಿತ್ತು. ಮಹಾರಾಷ್ಟ್ರ, ಕೇರಳ ಪ್ರವಾಹಕ್ಕೆ ಹೆಚ್ಚಿನ ಅನುದಾನ ನೀಡಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಇನ್ನೂ ಪರಿಹಾರವನ್ನೇ ಘೋಷಿಸಲಿಲ್ಲ. ಯಡಿಯೂರಪ್ಪ ಸುಮ್ಮನೆ ಹೋಗಿ ಪ್ರಧಾನಿಗಳನ್ನು ಭೇಟಿ ಮಾಡಿ ಬರೋದು ಸರಿಯಲ್ಲ, ಪರಿಹಾರ ಘೋಷಣೆ ಮಾಡಿಸಬೇಕಿತ್ತು ಎಂದು ಟೀಕಿಸಿದರು.

ಕಾಂಗ್ರೆಸ್ ಜಾರಿಗೆ ತಂದ ಯೋಜನೆಗೆ ಬಿಜೆಪಿ ಸರ್ಕಾರ ಹಣಕಾಸಿನ ಕಡಿತ ಮಾಡುತ್ತಿರುವುದು ಸರಿಯಲ್ಲ. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳು ಬಡವರಿಗೆ ತಲುಪಿರುವ ಯೋಜ‌ನೆಗಳು. ಈ ಯೋಜನೆಗಳಿಗೆ ಹಣಕಾಸನ್ನು ಕಡಿತ ಮಾಡುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹಿಳಾ ಘಟಕ, ಒಬಿಸಿ, ಸೇವಾದಳ, ಎನ್​ಎಸ್​ಯುಐ, ಕಾರ್ಮಿಕ ಘಟಕ, ಲೀಗಲ್ ಸೆಲ್​ಗಳ ಮುಖಂಡರ ಸಭೆ ನಡೆಯಿತು. ಈ ವೇಳೆ 17 ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗುವ ಸಾಧ್ಯತೆ ಹಿನ್ನೆಲೆ ಭೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಮುಖಂಡರಿಗೆ ಹಿರಿಯ ನಾಯಕರು ಸಲಹೆ, ಸೂಚನೆ ನೀಡಿದರು.

ABOUT THE AUTHOR

...view details