ಕರ್ನಾಟಕ

karnataka

ETV Bharat / city

45 ದಿನಗಳಾದ್ರೂ ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರ ಬಿಡಿಗಾಸು ನೀಡಿಲ್ಲ: ಕಾಂಗ್ರೆಸ್​​​ ಕಿಡಿ - ನೆರೆ ಸಮಸ್ಯೆ

ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 45 ದಿನ ಕಳೆದರೂ ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಾಂಗ್ರೆಸ್

By

Published : Sep 16, 2019, 10:26 AM IST

ಬೆಂಗಳೂರು: ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 45 ದಿನ ಕಳೆದರೂ ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಟ್ವೀಟ್

ಕಾಂಗ್ರೆಸ್​ ತನ್ನ ಅಧಿಕೃತ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಿ, ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದ ಕುರಿತು ಇಲ್ಲಿಯವರೆಗೆ ನರೇಂದ್ರ ಮೋದಿ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ. ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸದ ಯಡಿಯೂರಪ್ಪ ನೇತೃತ್ವದ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.

ಸೋನಿಯಾ ಗಾಂಧಿ ಹೆಸರಿನಲ್ಲಿ ಟ್ವೀಟ್

ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರಿನಲ್ಲಿ ಕೂಡ ಟ್ವೀಟ್ ಮಾಡಲಾಗಿದ್ದು, ಮೋದಿ ಸರ್ಕಾರ ಜನಾದೇಶವನ್ನು 'ಅತ್ಯಂತ ಅಪಾಯಕಾರಿ'ಯಾಗಿ ಬಳಸಿಕೊಳ್ಳುತ್ತಿದೆ. ಈ ಮೂಲಕ ಕಾಂಗ್ರೆಸ್​ನ ಸಂಕಲ್ಪ ಮತ್ತು ತಾಳ್ಮೆಯ ಸ್ಥಿತಿಯನ್ನು ಪರೀಕ್ಷಿಸುತ್ತಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಹಣಿಯಲು ನಮಗಿರುವ ಏಕೈಕ ಮಾರ್ಗ ಚಳವಳಿ. ಪಕ್ಷದ ಕಾರ್ಯಕರ್ತರು, ನಾಯಕರು ಚಳವಳಿ ಕಾರ್ಯಸೂಚಿಯನ್ನು ಕೈಗೆತ್ತಿಕೊಳ್ಳಬೇಕು ಎಂದಿದೆ.

ABOUT THE AUTHOR

...view details