ಬೆಂಗಳೂರು:ವಿಧಾನಸಭೆ ಉಪಚುನಾವಣೆ ಹಿನ್ನೆಲೆ, ಚುನಾವಣೆ ನಡೆಯುವ ಬೆಂಗಳೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುವಂತೆ ನಗರ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆ..48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸುವಂತೆ ಆದೇಶ - city commissioner has ordered a ban on liquor sales for 48 hours
ವಿಧಾನಸಭೆ ಉಪಚುನಾವಣೆ ಹಿನ್ನೆಲೆ, ಚುನಾವಣೆ ನಡೆಯುವ ಬೆಂಗಳೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಾಡುವುದನ್ನ ನಿಷೇಧಿಸುವಂತೆ ನಗರ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
![ಉಪಚುನಾವಣೆ ಹಿನ್ನೆಲೆ..48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸುವಂತೆ ಆದೇಶ City Commissioner Bhaskar Rao](https://etvbharatimages.akamaized.net/etvbharat/prod-images/768-512-5202588-thumbnail-3x2-sow.jpg)
ನಗರ ಆಯುಕ್ತ ಭಾಸ್ಕರ್ ರಾವ್
ಚುನಾವಣೆ ನಡೆಯುವ ಕೆ.ಆರ್.ಪುರಂ,ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ. 3ರ ಆರು ಗಂಟೆಯಿಂದ ಡಿ, 5ರ ರಾತ್ರಿ ಹನ್ನೆರಡು ಗಂಟೆವರೆಗೆ ಮದ್ಯ ಮಾರಾಟ ಮಾಡುವುದನ್ನ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.
ಮತದಾರರಿಗೆ ಯಾವುದೇ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಚುನಾವಣಾ ಆಯೋಗ ಹಾಗೂ ಅಬಕಾರಿ ಜಂಟಿ ಆಯುಕ್ತರು ನಗರ ಆಯುಕ್ತರಿಗೆ ನಿರ್ದೇಶನ ನೀಡಿದ್ದು, ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.