ಬೆಂಗಳೂರು:ಕರ್ನಾಟಕ ಟಿಪ್ಪು ಟೈಗರ್ ಅಲ್ಪತ್ ಸಂಘಟನೆ ಅಧ್ಯಕ್ಷ ವಾಜೀದ್ ಪಾಷಾನನ್ನು ಸಿಸಿಬಿ ಪೊಲೀಸರು ಡಿ.ಜೆ.ಹಳ್ಳಿ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಯ ಹಿಂದೆ ಯಾರಿದ್ದಾರೆ? ಗಲಭೆ ನಡೆಸಲು ಕಾರಣವೇನು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ತಮ್ಮ ವಶಕ್ಕೆ ಪಡೆಯಲು ಪೊಲೀಸರು ನಿರ್ಧರಿಸಿದ್ದಾರೆ.
ತಪ್ಪೊಪ್ಪಿಕೊಂಡ ವಾಜೀದ್:ಹಿರಿಯ ಪೊಲೀಸ್ ಅಧಿಕಾರಿಗಳು ಸತತ ಎರಡು ಗಂಟೆಗಳ ಕಾಲ ವಾಜೀದ್ಗೆ ಫುಲ್ ಡ್ರಿಲ್ ಮಾಡಿದ ಕಾರಣ ಗಲಭೆಯಲ್ಲಿದ್ದು, ಗಲಾಟೆ ಮಾಡಲು ಪ್ರಚೋದನೆ ಕರೆ ನೀಡಿದ್ದಕ್ಕಾಗಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಈ ವೇಳೆ 10ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಹೆಸರುಗಳನ್ನು ಬಾಯ್ಬಿಟ್ಟಿದ್ದಾನೆ. ವಾಜೀದ್ ಹೇಳಿದ್ದ ಆರೋಪಿಗಳನ್ನು ಬಂಧಿಸಲು ವಿಶೇಷ ಪೊಲೀಸರ ತಂಡ ಕಾರ್ಯಾಚರಣೆಗೆ ಇಳಿದಿದೆ.