ಬೆಂಗಳೂರು :ಸಮಾಜಕ್ಕೆ ಕಂಟಕವಾಗಿ ಕಾಡುತ್ತಿರುವ ಡ್ರಗ್ಸ್ ಮಾಫಿಯಾವನ್ನು ರಾಜ್ಯದಿಂದ ಬುಡ ಸಮೇತ ಕಿತ್ತು ಹಾಕಬೇಕು ಹಾಗೂ ಇದಕ್ಕೆ ಸಂಬಂಧಪಟ್ಟವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಡ್ರಗ್ ಮಾಫಿಯಾವನ್ನು ಬುಡ ಸಮೇತ ಕಿತ್ತು ಹಾಕಬೇಕು : ಸಚಿವ ಗೋಪಾಲಯ್ಯ - ಡ್ರಗ್ ಮುಕ್ತ ಕರ್ನಾಟಕ ಕುರಿತು ಸಚಿವ ಗೋಪಾಲಯ್ಯ್ ಹೇಳಿಕೆ
ಡ್ರಗ್ಸ್ ಮಾಫಿಯಾ ಯುವ ಸಮುದಾಯದ ಭವಿಷ್ಯವನ್ನು ಹಾಳು ಮಾಡಿದ್ದಲ್ಲದೇ ಲಕ್ಷಾಂತರ ಜನರನ್ನು ಬಲಿ ಪಡೆಯುತ್ತಿದೆ. ಅಲ್ಲದೆ, ದೇಶಕ್ಕೆ ಹಾಗೂ ರಾಜ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಸಚಿವ ಕೆ. ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದರು.
ಡ್ರಗ್ ಮುಕ್ತ ಕರ್ನಾಟಕ ಸಹಿ ಅಭಿಯಾನ
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬೆಂಗಳೂರು ಉತ್ತರ ಬಿಜೆಪಿ ಯುವ ಮೋರ್ಚಾ ಘಟಕ ಒರಿಯನ್ ಮಾಲ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಡ್ರಗ್ ಮುಕ್ತ ಕರ್ನಾಟಕ ಸಹಿ ಅಭಿಯಾನ'ದಲ್ಲಿ ಭಾಗಿಯಾಗಿ ಮಾತನಾಡಿ, ಈ ಡ್ರಗ್ಸ್ ಮಾಫಿಯಾ ಯುವ ಸಮುದಾಯದ ಭವಿಷ್ಯವನ್ನು ಹಾಳು ಮಾಡಿದ್ದಲ್ಲದೇ ಲಕ್ಷಾಂತರ ಜನರನ್ನು ಬಲಿ ಪಡೆಯುತ್ತಿದೆ, ಅಲ್ಲದೆ ದೇಶಕ್ಕೆ ಹಾಗೂ ರಾಜ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.